ಹೊಸಪೇಟೆ: ‘ನಗರದಲ್ಲಿ ಗಾಜಿನ ಮನೆ ನಿರ್ಮಾಣಕ್ಕೆ ರೂಪುರೇಷೆ ಸಿದ್ಧಪಡಿಸಬೇಕು’ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಗುರುವಾರ ಇಲ್ಲಿ ತೋಟಗಾರಿಕೆ ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ನಗರದಲ್ಲಿನ ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣ ಪ್ರಾಧಿಕಾರದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಖನಿಜ ನಿಧಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಗಾಜಿನ ಮನೆ ನಿರ್ಮಿಸಿದರೆ ಪ್ರವಾಸೋದ್ಯಮ ಬೆಳವಣಿಗೆಗೆ ಸಹಕಾರಿಯಾಗಲಿದೆ. ಅದರ ಜೊತೆಗೆ ಉದ್ಯಾನ ನಿರ್ಮಾಣಕ್ಕೂ ಯೋಜನೆ ಸಿದ್ಧಪಡಿಸಬೇಕು’ ಎಂದು ತಿಳಿಸಿದರು.

‘ತಾಲ್ಲೂಕಿನಾದ್ಯಂತ ಕೈಗೆತ್ತಿಕೊಂಡಿರುವ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಈ ಕುರಿತು ಕಾಲಕಾಲಕ್ಕೆ ಮಾಹಿತಿ ನೀಡಬೇಕು’ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಮರೇಶಗೆ ಸೂಚಿಸಿದರು.

ನಗರಸಭೆ ಪೌರಾಯುಕ್ತೆ ಪಿ. ಜಯಲಕ್ಷ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಸುನಂದಾ, ತಾಲ್ಲೂಕು ವೈದ್ಯಾಧಿಕಾರಿ ಡಾ. ಭಾಸ್ಕರ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಿಶೋರ್ ಕುಮಾರ್ ಇದ್ದರು. ಸಭೆಗೂ ಮುನ್ನ ಸಚಿವರು ನಗರ ಹೊರವಲಯದ ಜೋಳದರಾಶಿ ಗುಡ್ಡಕ್ಕೆ ಭೇಟಿ ನೀಡಿ ಅದರ ಅಭಿವೃದ್ಧಿ ಕುರಿತು ವಲಯ ಅರಣ್ಯ ಅಧಿಕಾರಿ ವಿನಯ್ ಅವರೊಂದಿಗೆ ಚರ್ಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.