ಬಳ್ಳಾರಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಶನಿವಾರ ಸರಳಾದೇವಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಮುಂದೆ ತರಕಾರಿ ಮತ್ತು ಮಿರ್ಚಿ ಹಾಕಿ ಮಾರುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಅತಿಥಿ ಉಪನ್ಯಾಸಕ ಸಂಘದ ಜಿಲ್ಲಾ ಘಟಕದ ಧ್ಯಕ್ಷ ಟಿ.ದುರಗಪ್ಪ, ಮಾತನಾಡಿ, ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕು ಎಂದು ಒತ್ಗಾಯಿಸಿದರು. ಬೇಡಿಕೆ ಈಡೇರಿಸುವಂತೆ ಅನೇಕ ಬಾರಿ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ಸೇವೆ ಕಾಯಂಗೊಳಿಸಬೇಕು. ಅತಿಥಿ ಉಪನ್ಯಾಸಕರಿಗೆ ನೀಡುತ್ತಿರುವ ಪ್ರೋತ್ಸಾಹಧನ ಹೆಚ್ಚಿಸಬೇಕು. ಆರ್ಥಿಕವಾಗಿ ಕುಟುಂಬ ನಿರ್ವಹಣೆ ಮಾಡಲಾಗದೆ ಅನೇಕರು ವೃತ್ತಿ ಬಿಟ್ಟು ಬೇರೆ ಕೆಲಸ ಮಾಡುತ್ತಿದ್ದಾರೆ ಎಂದರು.

ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಶೀಲಿಸಿ ಅವರಿಗೆ ನ್ಯಾಯ ಒದಗಿಸಬೇಕು. ಅತಿಥಿ ಉಪನ್ಯಾಸಕರಿಗೆ ನೀಡುವ ಸಂಬಳವನ್ನು ಸರ್ಕಾರಿ ನೌಕರರಿಗೆ ನೀಡುವ ಹಾಗೆ ಪ್ರತಿ ತಿಂಗಳು ನೀಡಬೇಕು. ಅತಿಥಿ ಉಪನ್ಯಾಕರಿಗೆ ಯುಜಿಸಿ ನಿಯಮಾವಳಿ ಪ್ರಕಾರ ವೇತನ ನೀಡುವುದರ ಬಗ್ಗೆ ಸರ್ಕಾರ ತಕ್ಷಣವೇ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಅತಿಥಿ ಉಪನ್ಯಾಸಕರಾದ ಕೆ.ಬಸಪ್ಪ, ಸಿದ್ದೇಶ್, ರುದ್ರಮುನಿ, ದಸ್ತಗಿರಿ, ಜಗದೀಶ್, ಹನುಮಂತರಾಯ, ಶುಭಾಜ್ಯೋತಿ, ರುದ್ರಮ್ಮ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.