ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ ಅಂಗಳದಲ್ಲಿ ನಡೆಯುತ್ತಿರುವ ಮೂರನೇ ವರ್ಷದ ಹೂಳಿನ ಜಾತ್ರೆ ಶುಕ್ರವಾರ ಎರಡನೇ ದಿನಕ್ಕೆ ಕಾಲಿರಿಸಿತು.

ಮೂರು ಜೆ.ಸಿ.ಬಿ. ಯಂತ್ರಗಳ ಸಹಾಯದಿಂದ ಹೂಳು ತೆಗೆದು, 30 ಟ್ರ್ಯಾಕ್ಟರ್‌ಗಳಲ್ಲಿ ರೈತರು ಹೊಲಗಳಿಗೆ ಕೊಂಡೊಯ್ದರು. ಕಣಿವೆ ವೀರಭದ್ರೇಶ್ವರ ದೇಗುಲಕ್ಕೆ ಹೊಂದಿಕೊಂಡಿರುವ ಮಾರ್ಗದ ಎರಡೂ ಕಡೆಗಳಲ್ಲಿಯೂ ಮಣ್ಣು ಸುರಿಯಲಾಯಿತು.

ಗದುಗಿನ ವೀರೇಶ್ವರ ಪುಣ್ಯಾಶ್ರಮದ ಕಲ್ಲಜ್ಜಯ್ಯ ಸ್ವಾಮೀಜಿ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದರು. ‘ಮೂರು ರಾಜ್ಯಗಳ ಲಕ್ಷಾಂತರ ಜನರಿಗೆ ನೀರುಣಿಸುವ ತುಂಗಭದ್ರೆಯ ಒಡಲಿನಿಂದ ಹೂಳು ತೆಗೆಸುವುದು ಅತ್ಯಗತ್ಯ. ಅದಕ್ಕೆ ಎಲ್ಲರೂ ಕೈಜೋಡಿಸಬೇಕು. ಈ ವಿಷಯವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು’ ಎಂದು ಹೇಳಿದರು.

ತುಂಗಭದ್ರಾ ರೈತ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮ ಗೌಡ ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.