ಬಳ್ಳಾರಿ: ಶ್ರೀನಿವಾಸ್ ಕನ್‌ಸ್ಟ್ರಕ್ಷನ್ಸ್ ಮಾಲೀಕ, ಜಿಲ್ಲೆಯ ಪ್ರಮುಖ ಗುತ್ತಿಗೆದಾರ ಪಿಚ್ಚೇಶ್ವರ ರಾವ್ ಅವರ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದರು.

ತಾಳೂರು ರಸ್ತೆಯಲ್ಲಿರುವ ಅವರ ಮನೆ ಹಾಗೂ ಕಚೇರಿಯ ಮೇಲೆ ಬೆಳಿಗ್ಗೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಐದಾರು ಗಂಟೆ ಪರಿಶೀಲಿಸಿದರು.

ಪಿಚ್ಚೇಶ್ವರ ರಾವ್ ಅವರು ರಸ್ತೆ, ಕಾಲುವೆಗಳು ಸೇರಿ ಬೃಹತ್ ಕಾಮಗಾರಿಗಳ ಗುತ್ತಿಗೆದಾರರು. ಶ್ರೀನಿವಾಸ ಕನ್‌ಸ್ಟ್ರಕ್ಷನ್ಸ್ ಮತ್ತು ಶ್ರೀನಿವಾಸ ಮಿನರೆಲ್ಸ್ ಹೆಸರಿನಲ್ಲಿ ಅವರು ಗುತ್ತಿಗೆ ಕಾಮಗಾರಿಗಳನ್ನು ನಡೆಸುತ್ತಾರೆ.

ಆದಾಯ ತೆರಿಗೆ ವಂಚನೆ ಮತ್ತು ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆಯ ಆರೋಪದ ಮೇಲೆ ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯ ನಾಲ್ವರು ಅಧಿಕಾರಿಗಳು ದಾಳಿ ನಡೆಸಿದ್ದಾರೆ.

‘ಕಾರ್ಯಾಚರಣೆ ವೇಳೆ ಪಿಚ್ಚೇಶ್ವರ ರಾವ್ ಮನೆಯಲ್ಲಿದ್ದರು. ಅವರಿಂದ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.