ಕುರುಗೋಡು (ಬಳ್ಳಾರಿ ಜಿಲ್ಲೆ): ರಾಷ್ಟ್ರಮಟ್ಟದ ಕೊಕ್ಕೊ ಕ್ರೀಡಾಕೂಟದಲ್ಲಿ ತಾಲ್ಲೂಕಿನ ಸೋಮಲಾಪುರ ಗ್ರಾಮದ ವಿ.ಅಂಕಿತಾ ಮತ್ತು ಓರ್ವಾಯಿ ಗ್ರಾಮದ ಉಮಾದೇವಿ ಸ್ಥಾನ ಪಡೆದಿದ್ದಾರೆ.

ಒಡಿಶಾ ರಾಜ್ಯದ ಭುವನೇಶ್ವರದಲ್ಲಿ ಇದೇ 9 ರಿಂದ 12ರ ವರೆಗೆ ನಾಲ್ಕು ದಿನಗಳ ಕಾಲ ಜರುಗುವ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 15 ಜನರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೂಚನೆಯಂತೆ ರಾಜ್ಯ ಕೊಕ್ಕೊ ಅಸೋಸಿಯೇಷನ್ ಆಯ್ಕೆ ಮಾಡಿದೆ.

ಪರಿಶಿಷ್ಟ ಜಾತಿಗೆ ಸೇರಿದ ಕ್ರೀಡಾಪಟುಗಳು ಮಾತ್ರ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ಬಳ್ಳಾರಿ ಜಿಲ್ಲೆಯಿಂದ ತಾಲ್ಲೂಕಿನ ಇಬ್ಬರು ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢಶಾಲೆ ಹಂತದಲ್ಲಿ ಅಂಕಿತಾ ಮತ್ತು ಉಮಾದೇವಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಕೊಕ್ಕೊ ಪಂದ್ಯಾವಳಿಯಲ್ಲಿ ಜಿಲ್ಲೆಯನ್ನು ಪ್ರನಿತಿಧಿಸಿ ಗಮನಸೆಳೆದಿದ್ದರು.

ಸೌಲಭ್ಯ ವಂಚಿತ ಗ್ರಾಮೀಣ ಭಾಗದ ಕ್ರೀಡಾಪಟುಗಳು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವುದು ಈ ಭಾಗದ ಕ್ರೀಡಾಪ್ರೇಮಿಗಳಿಗೆ ಹರ್ಷ ತಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.