ಸಂಡೂರು: ತಾಲ್ಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟೀನ್ ಕಂಬ ಹಾಗೂ ಉತ್ತರ ಮಲೈ ಮಧ್ಯೆ ಕೆಎಸ್ಆರ್ಟಿಸಿ ಬಸ್ ಬುಧವಾರ ನೆಲಕ್ಕುರುಳಿದೆ. ಅಪಘಾತದಲ್ಲಿ ಶಾಲಾ ಮಕ್ಕಳು ಸೇರಿದಂತೆ ನಲವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀವಾಗಿ ಗಾಯಗೊಂಡಿರುವ ಹತ್ತು ಮಕ್ಕಳನ್ನು ಆ್ಯಂಬ್ಯುಲೆನ್ಸ್ ಮೂಲಕ ಬಳ್ಳಾರಿಯ ವಿಮ್ಸ್ಗೆ ಕರೆದೊಯ್ಯಲಾಗಿದೆ. ಅಪಘಾತದಲ್ಲಿ ಬಸ್ ಕಂಡಕ್ಟರ್ ಕೈ ಮುರಿದಿದೆ.

ಚಿಕಿತ್ಸೆ ನೀಡಲಾಗುತ್ತಿರುವ ಸಂಡೂರು ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಭೇಟಿ ನೀಡಿದ್ದಾರೆ. ಅಪಘಾತಕ್ಕೆ ಖಚಿತ ಕಾರಣ ಇನ್ನೂ ತಿಳಿದು ಬಂದಿಲ್ಲ.

ಗಿರೆನಹಳ್ಳಿ, ಉತ್ತರ ಮಲೈ ಭಾಗದಿಂದ ಸಂಡೂರಿಗೆ ಬರುತ್ತಿದ್ದ ಬಸ್ನಲ್ಲಿ ಶಾಲಾ ಕಾಲೇಜು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣ ಮಾಡುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.