ಹೊಸಪೇಟೆ (ವಿಜಯನಗರ): ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ತರಬೇಕೆಂದು ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಶುಕ್ರವಾರ ಮೂರನೇ ದಿನವೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸರ್ಕಾರ ಹಾಗೂ ಸ್ಥಳೀಯ ಅಧಿಕಾರಿಗಳು ಕೆಲಸಕ್ಕೆ ಹಾಜರಾಗುವಂತೆ ಎಷ್ಟೇ ಮನವಿ ಮಾಡಿಕೊಂಡರೂ ಸಾರಿಗೆ ನೌಕರರು ಪಟ್ಟು ಸಡಿಲಿಸುತ್ತಿಲ್ಲ. ಇದು ಸಾರಿಗೆ ಸೇವೆ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಇದರಿಂದ ಜನ ಬಹಳ ಸಮಸ್ಯೆ ಎದುರಿಸುತ್ತಿದ್ದಾರೆ.

ಯಾವುದೇ ರೀತಿಯ ಖಾಸಗಿ ವಾಹನಗಳು ನಗರದ ಕೇಂದ್ರ ಬಸ್ ನಿಲ್ದಾಣದೊಳಗೆ ಪ್ರವೇಶಿಸಲು ಸಿಬ್ಬಂದಿ ಈ ಹಿಂದೆ ಬಿಡುತ್ತಿರಲಿಲ್ಲ. ಅದಕ್ಕಾಗಿಯೇ ಸಿಬ್ಬಂದಿ 24X7ರಂತೆ ಕೆಲಸ ನಿರ್ವಹಿಸುತ್ತಾರೆ. ಆದರೆ, ಈಗ ಅದೇ ಸಾರಿಗೆ ಸಂಸ್ಥೆಯವರು ಕೇಂದ್ರ ಬಸ್ ನಿಲ್ದಾಣದಿಂದ ಖಾಸಗಿ ವಾಹನಗಳು ಸಂಚರಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಮೂರನೇ ದಿನವೂ ಬಸ್ ನಿಲ್ದಾಣದಿಂದಲೇ ಖಾಸಗಿ ಬಸ್, ಮ್ಯಾಕ್ಸಿಕ್ಯಾಬ್, ಟಂ ಟಂ, ಕ್ರೂಸರ್ ವಾಹನಗಳು ಸಂಚರಿಸಿದವು. ಬೆರಳೆಣಿಕೆಯಷ್ಟು ಸಾರಿಗೆ ಬಸ್ಗಳು ದೀರ್ಘ ಸಮಯದ ವರೆಗೆ ಕಾದು ಕೆಲವು ಮಾರ್ಗಗಳಲ್ಲಿ ಸಂಚರಿಸಿದವು.

ಸಾರಿಗೆ ಸಂಸ್ಥೆಯ ಕೆಲವೇ ಕೆಲವು ಬಸ್ಸುಗಳು, ಖಾಸಗಿ ವಾಹನಗಳು ತಾಲ್ಲೂಕು ಕೇಂದ್ರಗಳಿಗಷ್ಟೇ ಸಂಚರಿಸುತ್ತಿರುವುದರಿಂದ ಹೆಚ್ಚಿನ ಜನರಿಗೆ ಅನುಕೂಲವಾಗುತ್ತಿಲ್ಲ. ಮೇಲಿಂದ ಖಾಸಗಿಯವರು ಬಸ್ ದರಕ್ಕಿಂತ ದುಪ್ಪಟ್ಟು ಹಣ ಕೇಳುತ್ತಿದ್ದಾರೆ ಎಂಬ ಆರೋಪ ಇದೆ. ಅದಕ್ಕಾಗಿ ಜನ ಬಸ್ ನಿಲ್ದಾಣದ ಕಡೆಗೆ ಸುಳಿಯುತ್ತಿಲ್ಲ. ಹೆಚ್ಚಿನವರು ದ್ವಿಚಕ್ರ ವಾಹನ ಸೇರಿದಂತೆ ಇತರೆ ವೈಯಕ್ತಿಕ ವಾಹನ, ಗೆಳೆಯರು, ಸಂಬಂಧಿಕರ ವಾಹನಗಳಲ್ಲಿ ದೈನಂದಿನ ಕೆಲಸಕ್ಕೆ ಬೇರೆ ಬೇರೆ ಭಾಗಗಳಿಗೆ ಹೋಗಿ ಬರುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.