ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ | ಕುಷ್ಟರೋಗ ತಡೆಗೆ ಕೈಜೋಡಿಸಿ: ಡಿಸಿ

ಜಿಲ್ಲೆಯಲ್ಲಿ ಜು.29 ರಿಂದ ಆ.14ರ ವರೆಗೆ ಕುಷ್ಟರೋಗ ಪ್ರಕರಣ ಪತ್ತೆ ಅಭಿಯಾನ
Published 23 ಜುಲೈ 2024, 16:19 IST
Last Updated 23 ಜುಲೈ 2024, 16:19 IST
ಅಕ್ಷರ ಗಾತ್ರ

ಬಳ್ಳಾರಿ: ಜು.29 ರಿಂದ ಆ.14ರ ವರೆಗೆ ಜಿಲ್ಲೆಯಲ್ಲಿ ಕುಷ್ಟರೋಗ ಪತ್ತೆ ಅಭಿಯಾನ ನಡೆಯುತ್ತಿದ್ದು, ಅಂತರ್ ಇಲಾಖೆ ಹಾಗೂ ಎನ್‍ಜಿಒಗಳ ನೆರವಿನಿಂದ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚಿಸಿದ್ದಾರೆ.

ಕುಷ್ಟರೋಗ ಪ್ರಕರಣ ಪತ್ತೆ ಅಭಿಯಾನ ಕುರಿತ ಜಿಲ್ಲಾಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ‘ಕುಷ್ಟರೋಗ ಸಾಂಕ್ರಾಮಿಕ ಕಾಯಿಲೆ. ಇದು ಮೈಕೋಬ್ಯಾಕ್ಟೀರಿಯಂ ಲೆಪ್ರೈ ಎಂಬ ರೋಗಾಣುವಿನಿಂದ ಬರುತ್ತದೆ. ರೋಗಿಯು ಕೆಮ್ಮಿದಾಗ, ಸೀನಿದಾಗ ಬರುವ ಹನಿಗಳು, ಉಸಿರಾಡುವ ಗಾಳಿಯ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಪ್ರಾರಂಭಿಕ ಹಂತದಲ್ಲೇ  ಚಿಕಿತ್ಸೆ ನೀಡಿದರೆ ಅಂಗವಿಕಲತೆ ತಪ್ಪಿಸಬಹುದು’ ಎಂದರು.

ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪುರುಷ ಸ್ವಯಂ ಸೇವಕರು ಅಭಿಯಾನದಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು. ಕಾಯಿಲೆಯುಳ್ಳವರು ಪತ್ತೆಯಾದರೆ, ತಪಾಸಣೆ ಮಾಡಿಸಿ ಚಿಕಿತ್ಸೆ ಕೊಡಿಸಬೇಕು ಎಂದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಮಾತನಾಡಿ, ‘ಜಿಲ್ಲೆಯಲ್ಲಿ ಒಟ್ಟು 2,15,390 ಮನೆ ಸಮೀಕ್ಷೆ ಮಾಡುವ ಗುರಿ ಇದೆ. ಇದಕ್ಕಾಗಿ 820 ತಂಡ ರಚಿಸಲಾಗಿದೆ’ ಎಂದರು.

ವಲಸೆ ಕಾರ್ಮಿಕರು ದುಡಿಯುವ 45 ಸ್ಥಳಗಳನ್ನು ಗುರುತಿಸಲಾಗಿದ್ದು, ಆರೋಗ್ಯ ಇಲಾಖೆಯ ತಂಡಗಳು ಭೇಟಿ ನೀಡಿ ಸಮೀಕ್ಷೆ ಮಾಡಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ಕೆ.ಜಿ.ವೀರೇಂದ್ರ ಕುಮಾರ್, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿ.ಕೆ.ಮರಿಯಮ್‌ ಬೀ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT