ಹೊಸಪೇಟೆ: ‘ಬೈಕ್ ಸವಾರರಿಂದಲೇ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ’ ಎಂದು ಬಳ್ಳಾರಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎನ್. ಲಾವಣ್ಯ ತಿಳಿಸಿದರು.

ಇಲ್ಲಿನ ವಿಜಯನಗರ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಮಾಸಿಕ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ರಸ್ತೆ ಅಪಘಾತಗಳಲ್ಲಿ ಹೆಚ್ಚಿನ ಹಾನಿ ಉಂಟಾಗುತ್ತಿರುವುದು ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರಿಗೆ. ನಾಲ್ಕು ಚಕ್ರದ ವಾಹನಗಳಲ್ಲಿ ಸುರಕ್ಷತಾ ವ್ಯವಸ್ಥೆ ಇದ್ದೇ ಇರುತ್ತದೆ. ಆದರೆ, ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು ರಸ್ತೆ ಸುರಕ್ಷತಾ ನಿಯಮಗಳನ್ನು ಸರಿಯಾಗಿ ಪಾಲಿಸದೇ ಇರುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಅದರಲ್ಲೂ ಅನೇಕರು ಹೆಲ್ಮೆಟ್ ಧರಿಸದೇ ಓಡಾಡುತ್ತಾರೆ. ಇದರಿಂದ ಅವರ ಜೀವಕ್ಕೂ ಕಂಟಕವಾಗಬಹುದು’ ಎಂದು ಹೇಳಿದರು.

‘ಬೈಕ್ ಸವಾರರು ಹೆಲ್ಮೆಟ್ ಧರಿಸಿಕೊಂಡರೆ ಅಪಘಾತ ಸಂಭವಿಸಿದರೂ ಬದುಕುಳಿಯಬಹುದು. ಅಪಘಾತ ಸಂಭವಿಸಿದ ಸಂದರ್ಭದಲ್ಲಿ ನಿಂತು ನೋಡಬಾರದು. ವಿಡಿಯೋ ಮಾಡುವುದರ ಬದಲು ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸುವ ಕೆಲಸ ಮಾಡಬೇಕು. ಅಪಘಾತ ಸಂಭವಿಸಿದ ಮೊದಲ ಒಂದು ಗಂಟೆ ಬಹಳ ಮುಖ್ಯವಾಗಿರುತ್ತದೆ. ಗಾಯಗೊಂಡವರ ಜೀವ ಉಳಿಸಬಹುದು’ ಎಂದು ತಿಳಿಸಿದರು.

‘1989ರಲ್ಲಿ ಆರಂಭಗೊಂಡಿರುವ ಜಾಗೃತಿ ಕಾರ್ಯಕ್ರಮವು ಸತತ 31 ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಇಲಾಖೆಯು ಜನರಲ್ಲಿ ಈ ಮೂಲಕ ಜಾಗೃತಿ ಮೂಡಿಸುತ್ತಿದೆ. ಆದರೆ, ಅಂತಿಮವಾಗಿ ಸಾರ್ವಜನಿಕರು ಅವರ ಕರ್ತವ್ಯ ಏನು ಎನ್ನುವುದನ್ನು ತಿಳಿದುಕೊಂಡು ರಸ್ತೆ ನಿಯಮ ಪಾಲಿಸುತ್ತ ವಾಹನ ಓಡಿಸಬೇಕು’ ಎಂದರು.

ಡಿವೈಎಸ್ಪಿ ವಿ. ರಘುಕುಮಾರ್ ಮಾತನಾಡಿ, ‘ಮೂರು ವರ್ಷಗಳ ಅಪಘಾತದ ಅಂಕಿ ಅಂಶ ಗಮನಿಸಿದರೇ ಅಪಘಾತದಲ್ಲಿ ಹೆಚ್ಚಿನವರು ಅಪ್ರಾಪ್ತರೇ ಸೇರಿದ್ದಾರೆ. ಎಲ್ಲ ಕಾಲೇಜುಗಳ ಬಳಿ ನಮ್ಮ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಾಲಿ ಸಿದ್ದಯ್ಯ ಮಾತನಾಡಿ, ‘ಕಾಲೇಜು ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆಯು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಅದರ ಬಗ್ಗೆ ತಿಳಿದುಕೊಳ್ಳಬೇಕು. ಎಲ್ಲರೂ ಸಂಚಾರ ನಿಯಮ ಪಾಲಿಸಬೇಕು’ ಎಂದು ಹೇಳಿದರು.

ಪದವಿ ಪ್ರಾಚಾರ್ಯ ವಿ.ಎಸ್. ಪ್ರಭಯ್ಯ, ಪಿಯು ಪ್ರಾಚಾರ್ಯ ಸುಜಾತಾ ಬೆಳ್ಳಿಗುಂಡಿ, ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಬಿ.ಜಿ. ಕನಕೇಶಮೂರ್ತಿ, ಟಿಬಿ ಡ್ಯಾಂ ಸಿಪಿಐ ನಾರಾಯಣ, ಸ್ವತಂತ್ರ ಪಿಯು ಕಾಲೇಜಿನ ಪ್ರಾಚಾರ್ಯ ಹನುಮಂತ ಗೌಡ, ಸಂಚಾರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮಹಾಂತೇಶ್ ಸಜ್ಜನ್, ಅಡವಿ ವಿಶ್ವೇಶ್ವರ ಗೌಡ, ಶ್ರೀನಿವಾಸ ಇದ್ದರು. ಲಾವಣ್ಯ ಅವರು ವಿದ್ಯಾರ್ಥಿಗಳಿಗೆ ಸಂಚಾರ ನಿಯಮಕ್ಕೆ ಸಂಬಂಧಿಸಿದಂತೆ ಪ್ರತಿಜ್ಞಾ ವಿಧಿ ಭೋದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.