ಹೊಸಪೇಟೆ: ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಅಂಗವಾಗಿ ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ ಅವರು ಆ. 20ರಂದು ತಾಲ್ಲೂಕಿನ ಜಿ.ನಾಗಲಾಪುರದಲ್ಲಿ ವಾಸ್ತವ್ಯ ಮಾಡುವರು.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಗಳವಾರ ಪೂರ್ವಸಿದ್ಧತಾ ಸಭೆ ನಡೆಸಿದ ಅವರು, ಗ್ರಾಮ ವಾಸ್ತವ್ಯಕ್ಕೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನೀಡಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ನಾಗಲಾಪುರದಲ್ಲಿ ಪ್ರತಿ ಮನೆ ಬಾಗಿಲಿಗೆ ಹೋಗಿ ಸರ್ವೆ ಮಾಡಬೇಕು. ಕೆಲಸಗಳನ್ನು ಪರಿಶೀಲಿಸಿ ಮಾಹಿತಿಯನ್ನು ತಹಶೀಲ್ದಾರ್ ಕಚೇರಿಗೆ ನೀಡಬೇಕು ಎಂದು ಸೂಚಿಸಿದರು.

ಸಾರ್ವಜನಿಕರು ಸಮಸ್ಯೆಗಳು ಎದುರಿಸುತ್ತಿದ್ದರೆ ಕ್ರಮ ವಹಿಸಬೇಕು. ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು. ಗ್ರಾಮ ವಾಸ್ತವ್ಯದ ದಿನ ಕೃಷಿ ಇಲಾಖೆ, ಆರೋಗ್ಯ ಇಲಾಖೆ, ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನೆ ಇಲಾಖೆಗಳು ಕಾರ್ಯಕ್ರಮದ ಸ್ಥಳದಲ್ಲಿ ಮಳಿಗೆಗಳನ್ನು ನಿರ್ಮಿಸಬೇಕೆಂದು ನಿರ್ದೇಶನ ನೀಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್, ಮರಿಯಮ್ಮನಹಳ್ಳಿಯ ಕಂದಾಯ ನಿರೀಕ್ಷಕ ಅಂದಾನಿಗೌಡ, ತಾಲ್ಲೂಕುಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.