ಹಂಪಿ (ಹೊಸಪೇಟೆ): ಹಂಪಿ ಉತ್ಸವದ ಸಮಾರೋಪ ಸಮಾರಂಭದ ಅಂಗವಾಗಿ ಭಾನುವಾರ ತಡರಾತ್ರಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಬಹುಭಾಷಾ ಗಾಯಕ ಕೈಲಾಶ್ ಖೇರ್ ಮೇಲೆ ಬಾಟಲಿ ಎಸೆದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು.

ರಾತ್ರಿ ಒಂದೂವರೆ ಗಂಟೆಗೆ ಕೈಲಾಶ್ ಖೇರ್ ಅವರು ಹಂಪಿ ಗಾಯತ್ರಿ ಪೀಠದ ಪ್ರಧಾನ ವೇದಿಕೆಯಲ್ಲಿ ಸಂಗೀತ ಕಾರ್ಯಕ್ರಮ ನಡೆಸಿಕೊಡುತ್ತಿದ್ದರು. ಈ ವೇಳೆ ಅವರ ಮೇಲೆ ಪ್ರೇಕ್ಷಕರ ಗ್ಯಾಲರಿಯಿಂದ ಯಾರೋ ನೀರು ತುಂಬಿದ ಬಾಟಲಿ ಎಸೆದರು. ಆದರೆ, ಬಾಟಲಿ ಅವರಿಂದ ಸ್ವಲ್ಪ ದೂರದಲ್ಲೇ ಬಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಜನರ ನಡುವಿನಲ್ಲಿ ಘಟನೆಗೆ ಕಾರಣರಾದ ಇಬ್ಬರನ್ನು ಗುರುತಿಸಿ ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು. ಅನಂತರ ಕಾರ್ಯಕ್ರಮ ಸುಗಮವಾಗಿ ಜರುಗಿತು. ರಾತ್ರಿ ಎರಡು ಗಂಟೆಯವರೆಗೆ ಕೈಲಾಶ್ ಖೇರ್ ಕಾರ್ಯಕ್ರಮ ನಡೆಸಿಕೊಟ್ಟರು. ಅವರ ಹಾಡಿನ ಮೋಡಿಗೆ ಜನ ಹುಚ್ಚೆದ್ದು ಕುಣಿದರು.

ಬಾಟಲಿ ಎಸೆತಕ್ಕೆ ಕಾರಣವೇನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.