ತೋರಣಗಲ್ಲು: ಇಲ್ಲಿನ ರೈಲ್ವೆ ನಿಲ್ದಾಣ ಪ್ರದೇಶದಲ್ಲಿನ ವಿವಿಧ ಅಂಗಡಿ, ಮಳಿಗೆಗಳ ಮೇಲೆ ಸಂಡೂರು ತಾಲ್ಲೂಕಿನ ತಹಶೀಲ್ದಾರ್ ಜಿ.ಅನಿಲ್‍ಕುಮಾರ್, ಪುರಸಭೆಯ ಮುಖ್ಯಾಧಿಕಾರಿ ಸತೀಶ್ ಅವರು ಶುಕ್ರವಾರ ದಾಳಿ ನಡೆಸಿ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡರು.

ಸಂಡೂರು ತಾಲ್ಲೂಕಿನ ತಹಶೀಲ್ದಾರ್ ಜಿ.ಅನಿಲ್‍ಕುಮಾರ್ ಮಾತನಾಡಿ ‘ಪ್ರಸ್ತುತ ದಿನಗಳಲ್ಲಿ ರಾಜ್ಯ ಸರ್ಕಾರವು ಪ್ಲಾಸ್ಟಿಕ್ ವಸ್ತುಗಳ ಮಾರಾಟ, ಬಳಕೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಿದ್ದು, ಕೆಲವು ಅಂಗಡಿ, ಮಳಿಗೆಗಳ ಮಾಲಿಕರು ಅಕ್ರಮವಾಗಿ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮಾಡುವುದು ಸರಿಯಲ್ಲ. ಅಂಗಡಿಗಳ ನಾಮಫಲಕಗಳ ಮೇಲೆ ಕಡ್ಡಾಯವಾಗಿ ಕನ್ನಡ ಬರಹದ ನಾಮ ಫಲಕಗಳನ್ನು ಅಳವಡಿಸಬೇಕು’ ಎಂದರು.

ಕುರೆಕುಪ್ಪ ಪುರಸಭೆಯ ಮುಖ್ಯಾಧಿಕಾರಿ ಸತೀಶ್, ಪುರಸಭೆಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಯು ಅಂಗಡಿ, ಮಳಿಗೆಗಳ ಮೇಲೆ ದಾಳಿಯ ದಾಳಿ ನಡೆಸಿ ಸುಮಾರು 50 ಕೆಜಿ ತೂಕದ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.