ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಉಪ ಚುನಾವಣೆಯ ಕಾವು ಹೆಚ್ಚಿದೆ. ಕ್ಷೇತ್ರದಲ್ಲಿ 2004ರಿಂದಲೂ ಬಹುಮುಖ, ತ್ರಿಕೋನ ಹೋರಾಟಕ್ಕೆ ಕಂಡುಬಂದಿದೆ. ಬಿಜೆಪಿಯ ಬಂಡಾಯ ಕಾಂಗ್ರೆಸ್ಗೆ ವರವಾಗುತ್ತಲೇ ಬಂದಿತ್ತು. ಈ ಬಾರಿ ಬಿಜೆಪಿಗೆ ಬಂಡಾಯದ ಬಿಸಿ ಇಲ್ಲ. ಹೀಗಾಗಿ ಕಾಂಗ್ರೆಸ್–ಬಿಜೆಪಿಗೆ ನೇರಾನೇರಾ ಪೈಪೋಟಿ ಬಿದ್ದಿದೆ. ಇದು ಚುನಾವಣೆಯ ಫಲಿತಾಂಶವನ್ನೇ ಬದಲಿಸುವ ಸಾಧ್ಯತೆಗಳಿವೆ. ಕಾಂಗ್ರೆಸ್ ಈ ಹಿಂದಿನ ನಾಲ್ಕು ಚುನಾವಣೆಯಂತೇ ನಿರಾಯಾಸವಾಗಿ ಗೆಲ್ಲಲು ಸಾಧ್ಯವಿಲ್ಲ. ನೇರ ಹಣಾಹಣಿ ಶತಃಸಿದ್ಧ ಎಂಬ ಮಾತುಗಳು ಕೇಳಿಬಂದಿವೆ. ಈ ವೇಳೆ, ಕಾಂಗ್ರೆಸ್ ಅಭ್ಯರ್ಥಿ ಇ. ಅನ್ನಪೂರ್ಣ ಅವರನ್ನು ‘ಪ್ರಜಾವಾಣಿ’ ಮಾತನಾಡಿಸಿದೆ. ಸಂದರ್ಶನದ ಸಂಕ್ಷಿಪ್ತ ರೂಪ ಈ ವಿಡಿಯೊ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.