ಹೊಸಪೇಟೆ: ಉಡುಪಿ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳ ಆರೋಗ್ಯ ಸುಧಾರಿಸಲೆಂದು ತಾಲ್ಲೂಕಿನ ಕಮಲಾಪುರ ಪಟ್ಟಣದ ರಾಘವೇಂದ್ರ ಸ್ವಾಮಿ ಮಠದಲ್ಲಿ ಗುರುವಾರ ವಿಶೇಷ ಪೂಜೆ, ಪ್ರಾರ್ಥನೆ ನೆರವೇರಿಸಲಾಯಿತು.

ಮಠದ ವ್ಯವಸ್ಥಾಪಕ ಶ್ರೀಧರಗಡ್ಡೆ ಗುರುರಾಜ್ ಮಾತನಾಡಿ, ‘ಉಡುಪಿ ಪೇಜಾವರ ಮಠದ ಶ್ರೀಗಳು ಸಮಾಜಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಬೇಗ ಗುಣಮುಖರಾಗಿ ಅವರು ಇನ್ನಷ್ಟು ಸೇವೆ ಮಾಡುವಂತಾಗಲಿ’ ಎಂದು ಹಾರೈಸಿದರು.

ನಗರದ ಕಾಶಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲೂ ವಿಶೇಷ ಪೂಜೆ ಜರುಗಿತು. ಪಂಚಾಮೃತಾಭಿಷೇಕ, ಅರ್ಚನೆ ಮಾಡಲಾಯಿತು. ದೇಗುಲದ ವ್ಯವಸ್ಥಾಪಕ ಟೀಕಾಚಾರ್ಯ ಇದ್ದರು.

ನಗರದ ರಾಣಿಪೇಟೆ ರಾಘವೇಂದ್ರ ಸ್ವಾಮಿ ಮಠದಲ್ಲೂ ಪೂಜೆ ನೆರವೇರಿಸಲಾಯಿತು. ಮಂತ್ರಾಲಯ ಗುರುಸಾರ್ವಭೌಮ ದಾಸ ಸಾಹಿತ್ಯ ಯೋಜನೆಯ ಜಿಲ್ಲಾ ಘಟಕದ ಸಂಚಾಲಕ ಅನಂತ ಪದ್ಮನಾಭ ರಾವ್, ಮಠದ ವ್ಯವಸ್ಥಾಪಕ ತಿರುಮಲೇಶ್, ವಿಜಯಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.