ತೆಕ್ಕಲಕೋಟೆ: 'ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸುವಲ್ಲಿ ಆಶಾ ಕಾರ್ಯಕರ್ತೆಯರು ಇಚ್ಚಾಶಕ್ತಿಯಿಂದ ಕಾರ್ಯನಿರ್ವಹಿಸಿ' ಎಂದು ಬಳ್ಳಾರಿ ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ ಡಾ.ರಮೇಶ್ ಬಾಬು ತಿಳಿಸಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಮಂಗಳವಾರ ನಡೆದ ಆಶಾ ಕಾರ್ಯಕರ್ತೆಯರ ಸಭೆ ಉದ್ದೇಶಿಸಿ ಮಾತನಾಡಿದರು.

'ಗರ್ಭಿಣಿಯರಿಗೆ ಪೌಷ್ಟಿಕ ಆಹಾರದ ಮಹತ್ವ ತಿಳಿಸುವ ಜತೆಗೆ ರಕ್ತಹೀನತೆಯಿಂದ ಬಳಲುವ ಗರ್ಭಿಣಿ ಹಾಗೂ ಮಕ್ಕಳ ಕುರಿತು ಗಮನ ಹರಿಸಬೇಕು' ಎಂದು ಹೇಳಿದರು.

'ಸಮುದಾಯ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು 50ಕ್ಕೂ ಹೆಚ್ಚು ಹೆರಿಗೆ ಆಗುತ್ತಿವೆ. ಆಸ್ಪತ್ರೆಯಲ್ಲಿಯೆ ಸಾಮಾನ್ಯ ಹೆರಿಗೆ ಆಗುವಂತೆ ನೋಡಿಕೊಳ್ಳಿ' ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ವೀರೇಂದ್ರ ಕುಮಾರ್ ತಿಳಿಸಿದರು.

ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಒಂದು ತಿಂಗಳಿಂದ ಹೆಚ್ ಬಿ, ಸಿಬಿಸಿ ಪರೀಕ್ಷೆ ನಡೆಯುತ್ತಿಲ್ಲ, ತಾಯಿ ಕಾರ್ಡ್ ಇಲ್ಲ. ತಿಂಗಳಿಗೆ ಒಮ್ಮೆ ಲೆಪ್ರಸಿ ಆಪರೇಶನ್ ಆಕ್ತಾ ಇತ್ತು ಈಗ ಅದೂ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಡಿ.ಎಚ್.ಒ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ.ರಾಮಕೃಷ್ಣ, ಡಾ.ವಲಿಭಾಷಾ, ತಾಲ್ಲೂಕು ಬಿ.ಪಿ.ಎಂ ಪ್ರಹ್ಲಾದ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಯು.ವೆಂಕೋಬ ಮತ್ತು ಆಶಾಕಾರ್ಯಕರ್ತೆಯರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.