ಬಳ್ಳಾರಿ: ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ರ್‍ಯಾಗಿಂಗ್‌ಗೆ ಕಡಿವಾಣ ಹಾಕದಿದ್ದರೆ ವಿದ್ಯಾರ್ಥಿಗಳು ಮಾನಸಿಕ ಖಿನ್ನತೆ ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಾರೆ ಎಂದು ಸಮಾಜಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ. ಎಸ್. ಕುಮಾರ್ ಹೇಳಿದರು.

ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗ ಬುಧವಾರ ಏರ್ಪಡಿಸಿದ್ದ ರ್‍ಯಾಗಿಂಗ್ ನಿಯಂತ್ರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರ್‍ಯಾಗಿಂಗ್‌ಗೆ ಒಳಗಾದ ಅತೀ ದುರ್ಬಲ ಮನಸ್ಸಿನ ವಿದ್ಯಾರ್ಥಿಗಳು ಆತ್ಮಹತ್ಯೆ ಹಾದಿ ಹಿಡಿಯುವ ಅಪಾಯವಿದೆ ಎಂದು ಎಚ್ಚರಿಸಿದರು

ಕಾಲ ಬದಲಾದಂತೆ ರ್‍ಯಾಗಿಂಗ್ ಸ್ವರೂಪ ಬದಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಸಹಿಷ್ಣುತೆ, ತಾಳ್ಮೆ ಕಡಿಮೆಯಾಗುತ್ತಿದೆ. ಕೆಲವೊಮ್ಮೆ ಸಣ್ಣ ಘಟನೆಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿ ಅನಾಹುತಗಳು ಸಂಭವಿಸುತ್ತಿವೆ ಎಂದು ತಿಳಿಸಿದರು.

ವಿವಿಯ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವಿಜಯಕುಮಾರ ಬಿ.ಮಲಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ರ್‍ಯಾಗಿಂಗ್‌ನಂಥ ಘಟನೆಗಳಲ್ಲಿ ಭಾಗವಹಿಸುವುದು, ಸಹಕರಿಸುವುದು ಮತ್ತು ಸಹಿಸುವುದು ಅಪರಾಧವಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಮುಕ್ತವಾಗಿ ಇಂಥಹ ಘಟನೆಗಳ ಬಗ್ಗೆ ಬೇರೆಯವರಿಗೆ ತಿಳಿಸಬೇಕು ಅದರಿಂದ ಮಾನಸಿಕ ಖಿನ್ನತೆಗೆ ಒಳಗಾಗುವ ಅಪಾಯಗಳನ್ನು ತಪ್ಪಿಸಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪ್ರೊ. ನಾಗಭೂಷಣ ವಿ.ಚರಂತಿಮಠ, ಪ್ರೊ. ಶಶಿಕಾಂತ ಮಜ್ಜಗಿ, ಕು.ಸ್ನೇಹ ಸುಮಾ ಹೆಗಡೆ, ಡಾ.ರಾಬಿಯಾ ಬೇಗಂ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.