ಹೊಸಪೇಟೆ: ‘ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರ ಜಿಲ್ಲೆ ಮಾಡಬೇಕೆಂಬ ಬೇಡಿಕೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಶಾಸಕರಾದ ಜಿ. ಸೋಮಶೇಖರ್ ರೆಡ್ಡಿ, ಜಿ. ಕರುಣಾಕರ ರೆಡ್ಡಿ ಅವರು ಮೂಲತಃ ಆಂಧ್ರದವರು. ಅವರು ತೆಲುಗು ಪ್ರಭಾವಕ್ಕೆ ಒಳಗಾದವರು. ಪ್ರತ್ಯೇಕ ಜಿಲ್ಲೆ ಆಗುವುದರಿಂದ ಜನಸಾಮಾನ್ಯರಿಗೆ ಏನು ಪ್ರಯೋಜನವಾಗಲಿದೆ ಎನ್ನುವುದು ಅವರಿಗೆ ಗೊತ್ತಿಲ್ಲ’ ಎಂದು ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ ಹೇಳಿದರು.

ಸೋಮವಾರ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ರೆಡ್ಡಿ ಸಹೋದರರು, ಆನಂದ್ ಸಿಂಗ್ ನಮಗೆ ಮುಖ್ಯವಲ್ಲ. ಆನಂದ್ ಸಿಂಗ್ ಈಗ ವಿಜಯನಗರ ಜಿಲ್ಲೆ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಹೊಸ ಜಿಲ್ಲೆ ರಚನೆಯಾಗಬೇಕೆಂದು ಈ ಭಾಗದ ಜನ ದಶಕದಿಂದ ಹೋರಾಟ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಯಾರ ಒತ್ತಡಕ್ಕೂ ಮಣಿಯದೇ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಹೊಸ ಜಿಲ್ಲೆ ಘೋಷಣೆ ಮಾಡಬೇಕು’ ಎಂದು ಆಗ್ರಹಿಸಿದರು.

‘ಬಳ್ಳಾರಿ ತೆಲುಗು ಪ್ರಭಾವಕ್ಕೆ ಒಳಗಾಗಿರುವ ಪ್ರದೇಶ. ಆದರೆ, ಉದ್ದೇಶಿತ ನೂತನ ವಿಜಯನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಪಶ್ಚಿಮ ತಾಲ್ಲೂಕುಗಳು ಭೌಗೋಳಿಕ, ಸಾಂಸ್ಕೃತಿಕ, ಸಾಮಾಜಿಕ ಹಾಗೂ ಭಾಷಿಕವಾಗಿ ಭಿನ್ನವಾಗಿವೆ. ಪಶ್ಚಿಮದ ಕೆಲವು ತಾಲ್ಲೂಕುಗಳು ಬಳ್ಳಾರಿಯಿಂದ 150 ಕಿ.ಮೀ.ಗೂ ಹೆಚ್ಚಿನ ದೂರದಲ್ಲಿವೆ. ಹೊಸಪೇಟೆ ಜಿಲ್ಲಾ ಕೇಂದ್ರವಾದರೆ ಆ ಅಂತರ ಕಡಿಮೆಯಾಗುತ್ತದೆ. ವಿಶ್ವವಿಖ್ಯಾತ ಹಂಪಿ, ತುಂಗಭದ್ರಾ ಜಲಾಶಯ, ವಿಮಾನ ನಿಲ್ದಾಣ ಸೇರಿದಂತೆ ಇತರೆ ಸೌಲಭ್ಯ ಹೊಂದಿರುವ ಹೊಸಪೇಟೆ ಜಿಲ್ಲಾ ಕೇಂದ್ರವಾಗಲು ಎಲ್ಲ ರೀತಿಯ ಅರ್ಹತೆ ಹೊಂದಿದೆ’ ಎಂದು ಪ್ರತಿಕ್ರಿಯಿಸಿದರು.

ಇದನ್ನೂ ಓದಿ...ಪ್ರತಿಷ್ಠೆ ವಿಷಯವಾದ ವಿಜಯನಗರ ಜಿಲ್ಲೆ ರಚನೆ

‘ಕೆಲವರು ಕೊಟ್ಟೂರು, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ ಅಥವಾ ಹೂವಿನಹಡಗಲಿ ಜಿಲ್ಲಾ ಕೇಂದ್ರವಾಗಬೇಕು ಎಂದು ವಾದ ಮಾಡುತ್ತಿದ್ದಾರೆ. ಆದರೆ, ಈ ತಾಲ್ಲೂಕುಗಳಲ್ಲಿ ಅಂತಹ ಸೌಲಭ್ಯಗಳಿಲ್ಲ. ಆದರೆ, ಹೊಸಪೇಟೆಗೆ ವಿಶೇಷ ಚರಿತ್ರೆ ಇದೆ. ಆಡಳಿತದ ದೃಷ್ಟಿಯಿಂದ ಅದೇ ಸೂಕ್ತ. ಅಧಿಕಾರ ವಿಕೇಂದ್ರೀಕರಣದ ಉದ್ದೇಶದಿಂದ ಆಂದ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಚಿಕ್ಕ ಚಿಕ್ಕ ಜಿಲ್ಲೆಗಳನ್ನು ಮಾಡಲಾಗುತ್ತಿದೆ. ವಿಶಾಲವಾಗಿರುವ ಬಳ್ಳಾರಿ ವಿಭಜನೆ ಮಾಡುವುದರಲ್ಲಿ ತಪ್ಪಿಲ್ಲ’ ಎಂದು ಪ್ರತಿಪಾದಿಸಿದರು.

ಇದನ್ನೂ ಓದಿ...ಬಳ್ಳಾರಿ ವಿಭಜಿಸಿ ವಿಜಯನಗರ ಜಿಲ್ಲೆ ರಚನೆ ಸಲ್ಲದು:ಶಾಸಕ ಜಿ.ಸೋಮಶೇಖರ ರೆಡ್ಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.