ಆನೇಕಲ್: ತೊಟ್ಟಿಲಲ್ಲಿದ್ದ ಒಂದೂವರೆ ತಿಂಗಳ ಹೆಣ್ಣು ಹಸುಗೂಸು ಮನೆ ಮೇಲಿನ ಸಿಂಟೆಕ್ಸ್ ಟ್ಯಾಂಕ್ನಲ್ಲಿ ಶವವಾಗಿ ಪತ್ತೆಯಾಗಿದೆ. ಸೂರ್ಯಸಿಟಿ ಪೊಲೀಸ್ ಠಾಣೆ ವ್ಯಾಪ್ತಿ ಇಗ್ಗಲೂರು ಗ್ರಾಮದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಹಸುಗೂಸನ್ನು ಪರಿಚಿತರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಮೃತ ಹಸುಗೂಸು ಮನು ಮತ್ತು ಹರ್ಷಿತಾ ದಂಪತಿ ಮಗು. ಒಂದೂವರೆ ವರ್ಷದ ಹಿಂದೆ ಇವರ ವಿವಾಹವಾಗಿತ್ತು. ಈ ದಂಪತಿಗೆ ಕಳೆದ ಒಂದೂವರೆ ತಿಂಗಳ ಹಿಂದೆ ಮಗು ಜನಿಸಿತ್ತು. ಏಳು ತಿಂಗಳಿಗೆ ಮಗು ಜನಿಸಿದ್ದರಿಂದ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಮೇಲೆ ಡಿಸ್ಚಾರ್ಜ್ ಮಾಡಲಾಗಿತ್ತು.

ಸೋಮವಾರ ಮಧ್ಯಾಹ್ನ ಹರ್ಷಿತಾ ಶೌಚಾಲಯಕ್ಕೆ ಹೋಗಿ ಬರುವಷ್ಟರಲ್ಲಿ ತೊಟ್ಟಿಲಲ್ಲಿದ್ದ ಮಗು ಕಾಣೆಯಾಗಿತ್ತು. ಕುಟುಂಬ ಸದಸ್ಯರು ಮಗುವಿಗಾಗಿ ಹುಡುಕಾಟ ನಡೆಸಿದ್ದರು. ನಂತರ ಸೂರ್ಯಸಿಟಿ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಹುಡುಕಾಟ ನಡೆಸಿದಾಗ ಮನೆ ಮೇಲಿನ ಸಿಂಟೆಕ್ಸ್ ಟ್ಯಾಂಕ್ನಲ್ಲಿ ಮಗು ಶವವಾಗಿ ಪತ್ತೆಯಾಗಿದೆ.

ಮನು ಮತ್ತು ಹರ್ಷಿತಾ ಅಂತರ್ಜಾತಿ ವಿವಾಹವಾಗಿದ್ದರು. ಕೌಟುಂಬಿಕ ಕಾರಣವೂ ಮಗು ಹತ್ಯೆಗೆ ಕಾರಣ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಸೂರ್ಯಸಿಟಿ ಪೊಲೀಸ್ ಇನ್ಸ್ಪೆಕ್ಟರ್ ಸಂಜೀವ್ ಮಹಾಜನ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆಶಾ ಭೇಟಿ ನೀಡಿ ಮಾಹಿತಿ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.