ಆನೇಕಲ್ : ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಷನ್ನ ಆನೇಕಲ್ ತಾಲ್ಲೂಕು ಘಟಕದಿಂದ ತಾಲ್ಲೂಕು ಮಟ್ಟದ ಮಾತೆ ಬಾಯಿ ಸಾವಿತ್ರಿಬಾಯಿ ಫುಲೆ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಕೋಮಲಾ, ಶೋಭಾ ಮತ್ತು ಬೇಗಹಳ್ಳಿ ಶಾಲೆಯ ಭಾಗ್ಯಮ್ಮ, ಕಾಡಅಗ್ರಹಾರ ಶಾಲೆಯ ಗೀತಾ, ಹಾರಗದ್ದೆ ಶಾಲೆಯ ಪುಟ್ಟರಾಜಮ್ಮ, ಅಳಿಬೊಮ್ಮಸಂದ್ರ ಶಾಲೆಯ ಡಿ.ರಾಧ, ಬ್ಯಾಗಡದೇನಹಳ್ಳಿ ಶಾಲೆಯ ವೆಂಕಟಲಕ್ಷ್ಮಮ್ಮ ಅವರಿಗೆ ಸಾವಿತ್ರಿಬಾಯಿ ಫುಲೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶ್, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತಿದೆ. ಅದರಂತೆ ಮಹಿಳಾ ಶಿಕ್ಷಕಿಯರು ಸಂಘಟಿತರಾಗಿ ರಚನಾತ್ಮಕ ಕಾರ್ಯಕ್ರಮ ರೂಪಿಸುತ್ತಿರುವುದು ಅರ್ಥಪೂರ್ಣವಾಗಿದೆ. ಉತ್ತಮ ಶಿಕ್ಷಕಿಯರನ್ನು ಗುರುತಿಸಿ ಸಾವಿತ್ರಿಬಾಯಿ ಫುಲೆ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿರುವುದು ಸಂತಸದ ವಿಚಾರ ಎಂದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಂಘದಿಂದ ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸಬೇಕು. ಇಲಾಖೆಯ ವತಿಯಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ತಿಳಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ತಮ್ಮ ಸಮಸ್ಯೆಗಳಿಗೆ ದನಿಯಾಗಲು ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘ ಆರಂಭಿಸಲಾಗಿದೆ. ಜತೆಗೆ ಸಂಘದ ಸದಸ್ಯರ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ಸಂಘದ ಜಿಲ್ಲಾ ಘಟಕದ ಗೌರವ ಅಧ್ಯಕ್ಷೆ ಬಿ.ಎಂ.ಶಾಂತಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶಿಕ್ಷಕಿಯರು ಬಂದ ಸಂದರ್ಭದಲ್ಲಿ ಅವರ ಸಮಸ್ಯೆಗಳಿಗೆ ಸ್ಪಂದಿಸಲು ಶಿಕ್ಷಕಿ ಸ್ನೇಹಿ ವಾತಾವರಣ ನಿರ್ಮಿಸಲು ಕ್ರಮ ಕೈಗೊಳ್ಳಬೇಕು. ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರೀಕೃತ ಅಡುಗೆ ಕೇಂದ್ರವನ್ನು ಪ್ರಾರಂಭಿಸಿ ಎಲ್ಲಾ ಶಾಲೆಗಳಿಗೂ ನೀಡುವ ನಿಟ್ಟಿನಲ್ಲಿ ಇಲಾಖೆ ಚಿಂತನೆ ಮಾಡಬೇಕು ಎಂದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಶಿವಣ್ಣ, ಖಜಾಂಚಿ ನಾಗರಾಜು, ಕಾರ್ಯದರ್ಶಿ ಮಂಜುನಾಥ್, ಉಪಾಧ್ಯಕ್ಷರಾದ ಆರ್.ಶ್ರೀನಿವಾಸ್, ಲಕ್ಷ್ಮೀಪತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಗೋವಿಂದರಾಜು, ಶಿಕ್ಷಣ ಸಂಯೋಜಕಿ ವೀಣಾ, ಸಂಘದ ತಾಲ್ಲೂಕು ಅಧ್ಯಕ್ಷೆ ಸರೋಜಮ್ಮ, ಪದಾಧಿಕಾರಿಗಳಾದ ರೂಪಾ, ನಾರಾಯಣಮ್ಮ, ಕೋಮಲಾ, ಸರಳ, ಧನಲಕ್ಷ್ಮೀ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.