ದೊಡ್ಡಬಳ್ಳಾಪುರ: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಶೆಟ್ಟಿಹಳ್ಳಿ ಬ್ಯಾಂಕ್ ವೃತ್ತದ ಸಮೀಪ ಶನಿವಾರ ರಾತ್ರಿ ದುಷ್ಕರ್ಮಿಗಳು ಗ್ಯಾಸ್ ಕಟರ್ ಬಳಸಿ ಎಟಿಎಂ ಯಂತ್ರ ಕತ್ತರಿಸಿ ಹಣ ದೋಚಿ ಪರಾರಿಯಾಗಿದ್ದಾರೆ.

ಘಟನ ಸ್ಥಳಕ್ಕೆ ಭಾನುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಎಟಿಎಂನಲ್ಲಿ ಇದ್ದ ಸುಮಾರು ₹15.10 ಲಕ್ಷ ಹಣವನ್ನು ದೋಚಿದ್ದಾರೆ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಮಾಹಿತಿ ನೀಡಿದ್ದಾರೆ.

ಕೈಗಾರಿಕಾ ಪ್ರದೇಶವಾದ ಕಾರಣ ತಿಂಗಳ ಆರಂಭದ ವೇತನದ ದಿನಗಳಲ್ಲಿ ಸಾಮಾನ್ಯವಾಗಿ ಎಟಿಎಂನಲ್ಲಿ ಹೆಚ್ಚಿನ ಹಣ ತುಂಬಲಾಗುತ್ತದೆ. ಇದನ್ನು ಗಮನಿಸಿರುವ ದುಷ್ಕರ್ಮಿಗಳು ಕಳವು ನಡೆಸಿರಬಹುದು ಎಂದು ಶಂಕಿಸಲಾಗಿದೆ.

ಆರೋಪಿಗಳ ಪತ್ತೆಗೆ ತಂಡವನ್ನು ರಚಿಸಿದ್ದು, ಎಟಿಎಂನಲ್ಲಿನ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲನೆ ಮತ್ತು ಮೊಬೈಲ್ ಲೊಕೇಷನ್ ಪರಿಶೀಲನೆ ಮೂಲಕ ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.