ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡಿಯು ಸಹ ನಮಗೆ ನ್ಯಾಯಯುತವಾಗಿ ದೊರೆಯಬೇಕಿರುವ ಮೀಸಲಾತಿ ವಂಚನೆಯಾಗಿರುವ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮೊದಲುಗೊಂಡು ರಾಜ್ಯದ ಮುಖ್ಯ ಕಾರ್ಯದರ್ಶಿ ಅವರಿಗೂ ಮನವಿ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಕನಿಷ್ಠ ಉತ್ತರವೂ ಬಂದಿಲ್ಲ.
ಎಂ.ರೋಹಿತ್, ಪಿಯು ವಿದ್ಯಾರ್ಥಿ
ಬಾಶೆಟ್ಟಿಹಳ್ಳಿ ಮಾತ್ರ ಪಟ್ಟದ ಸ್ವರೂಪ ಹೊಂದಿದೆ. ಆದರೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಯಾವುದೇ ಗ್ರಾಮಗಳಲ್ಲೂ ಸಹ ಪಟ್ಟಣದ ಯಾವುದೇ ರೀತಿಯ ಸೌಲಭ್ಯಗಳಿಲ್ಲ. ಇಂತಹ ಪ್ರದೇಶದ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳಿಗೆ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ನೀಡಲೇಬೇಕು.
ಬಿ.ಆರ್.ಪ್ರೀತಮ್, ಪಿಯು ವಿದ್ಯಾರ್ಥಿ
ರೈತರು ಉದ್ಯೋಗ ಖಾತರಿ ಯೋಜನೆಯಡಿ ಸೌಲಭ್ಯ ಪಡೆಯಲು ಜಾಬ್ ಕಾರ್ಡ್ ಕಡ್ಡಾಯ. ಬಾಶೆಟ್ಟಿಹಳ್ಳಿ ಪಟ್ಟಣ ವ್ಯಾಪ್ತಿಯ ರೈತರು ಸೌಲಭ್ಯ ಪಡೆಯಲು ಅಡ್ಡಿಯಾಗಿರುವ ವಿಷಯವನ್ನು ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.
ಡಿ.ರಾಜೇಶ್ವರಿ, ಸಹಾಯಕ ನಿರ್ದೇಶಕರು, ಕೃಷಿ ಇಲಾಖೆ, ದೊಡ್ಡಬಳ್ಳಾಪುರ