ದೊಡ್ಡಬಳ್ಳಾಪುರ: ದೇಶವನ್ನು ಪ್ರಗತಿ ಪಥದಲ್ಲಿ ಮುನ್ನೆಡಸಲು ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಬಿಜೆಪಿಗೆ ಶಕ್ತಿ ತುಂಬಲು ಬೂತ್ ಮಟ್ಟದಿಂದ ಮಹಿಳಾ ಸದಸ್ಯತ್ವ ಹೆಚ್ಚಾಗಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷೆ ಮಂಜಳಾ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ನಡೆದ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಣಿ ಮತ್ತು ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿದರು.

ಕೇಂದ್ರದಲ್ಲಿ ಹತ್ತು ವರ್ಷಗಳ ನರೇಂದ್ರ ಮೋದಿ ಅವರ ಆಳ್ವಿಕೆಯಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದ ಹಲವು ಯೋಜನೆಗಳಿಂದ ಮಹಿಳೆಯರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಶಾಸನಸಭೆಯಲ್ಲಿ ಶೇ 33, ಸ್ಥಳೀಯ ಸಂಸ್ಥೆಗಳಲ್ಲಿ ಶೇ 50ರಷ್ಟು ಮೀಸಲಾತಿಯಿಂದಾಗಿ ಮಹಿಳೆಯರು ಆಡಳಿತದ ಎಲ್ಲ ಹಂತಗಳಲ್ಲೂ ಮುಖ್ಯವಾಹಿನಿಗೆ ಬರಲು ಅವಕಾಶ ಸಿಗಲಿದೆ. ಬೂತ್ ಮಟ್ಟದಲ್ಲಿ ಕನಿಷ್ಠ 150 ರಿಂದ 200 ಸದಸ್ಯತ್ವ ಮಾಡಲೇ ಬೇಕಿದೆ. ಹೆಚ್ಚು ಸದಸ್ಯತ್ವ ಹೊಂದಿದರೆ ಪಕ್ಷ ಸದೃಢವಾಗಿ, ಮುಂದೆ ಅಧಿಕಾರಕ್ಕೆ ಬರಲು ಸಾಧ್ಯವಾಗಲಿದೆ ಎಂದರು.

ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ 1 ಕೋಟಿ ಸದಸ್ಯತ್ವದ ಗುರಿ ಹೊಂದಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 4 ವಿಧಾನಸಭಾ ಕ್ಷೇತ್ರ, 6 ಮಂಡಲದಿಂದ 4 ಲಕ್ಷ ಗುರಿ ಹೊಂದಲಾಗಿದೆ. ಕಾರ್ಯಕರ್ತರು ಹೆಚ್ಚಿನ ಸದಸ್ಯತ್ವ ಮಾಡಿಸಿ ಪಕ್ಷ ಸಂಘಟನೆಗೆ ಶ್ರಮಿಸಬೇಕು ಎಂದರು.

ಸಭೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ನಿರ್ಮಲಾ, ಜಿಲ್ಲಾ ಘಟಕದ ಅಧ್ಯಕ್ಷೆ ಅನುರೆಡ್ಡಿ, ಪ್ರಧಾನ ಕಾರ್ಯದರ್ಶಿ ವೇದವತಿ,ನಾಗವೇಣಿ, ತಾಲ್ಲೂಕು ಅಧ್ಯಕ್ಷೆ ಲಕ್ಷ್ಮಮ್ಮ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರವಿಕುಮಾರ್, ಮುಖಂಡರಾದ ವತ್ಸಲಾ,ಉಮಾಮಹೇಶ್ವರಿ, ರಾಜಮ್ಮ, ಸೌಮ್ಯ ಬಿಜೆಪಿ ಜಿಲ್ಲಾ ಕಾರ್ಯಾಲಯದ ಕಾರ್ಯದರ್ಶಿ ಜೆ.ಮಂಜುನಾಥ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.