ದೊಡ್ಡಬಳ್ಳಾಪುರ: ನಗರದಿಂದ ಬೆಂಗಳೂರು ಹಾಗೂ ವಿವಿಧ ಸ್ಥಳಗಳಿಗೆ ಪೊಲೀಸ್ ಭದ್ರತೆಯೊಂದಿಗೆ ಬಸ್ಗಳು ಸಂಚಾರ ಆರಂಭಿಸಿವೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ನೌಕರರು ನಡೆಸುತ್ತಿರುವ ಮುಷ್ಕರದಿಂದ ದೊಡ್ಡಬಳ್ಳಾಪುರ ಡಿಪೋದಿಂದ ನಿರ್ವಹಣೆ ಮಾಡಲಾಗುತ್ತಿದ್ದ 92 ಮಾರ್ಗಗಳ ಸಾರಿಗೆ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು.

ಗುರುವಾರ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರು-ದೊಡ್ಡಬಳ್ಳಾಪುರ ನಡುವೆ ಸಾರಿಗೆ ಸಂಚಾರ ಆರಂಭಿಸಲಾಗಿದೆ. ಉಳಿದಂತೆ ದಾಬಸ್ಪೇಟೆ ಕಡೆಗೆ ನಾಲ್ಕು ಹಾಗೂ ದೇವನಹಳ್ಳಿ ಮಾರ್ಗದಲ್ಲಿ ನಾಲ್ಕು, ದೇವನಹಳ್ಳಿ ಹಾಗೂ ಚಿಕ್ಕಬಳ್ಳಾಪುರಕ್ಕೆ ತಲಾ ಒಂದು ಸಾರಿಗೆ ಬಸ್ ಸಂಚಾರ ಆರಂಭಿಸಿವೆ ಎಂದು ಕೆಸ್ಆರ್ಟಿಸಿ ಡಿಪೋ ವ್ಯವಸ್ಥಾಪಕ ಆನಂದ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.