ಆನೇಕಲ್: ತಾಲ್ಲೂಕಿನ ಅತ್ತಿಬೆಲೆ ಪಬ್ಲಿಕ್ ಶಾಲೆಯಲ್ಲಿ ಸರ್ ಸಿ.ವಿ. ರಾಮನ್ ಜನ್ಮ ದಿನದ ಅಂಗವಾಗಿ ಸೋಮವಾರ ವಿಜ್ಞಾನ ವಸ್ತು ಪ್ರದರ್ಶನ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ವಿಜ್ಞಾನದ ವಿವಿಧ ಮಾದರಿಗಳನ್ನು ಪ್ರದರ್ಶಿಸಿದರು.

ಎಪಿಎಸ್ ವಿದ್ಯಾಸಂಸ್ಥೆ ಕಾರ್ಯದರ್ಶಿ ಡಿ. ಮುನಿರಾಜು ಮಾತನಾಡಿ, ನೊಬೆಲ್ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಸರ್ ಸಿ.ವಿ. ರಾಮನ್ ಅವರು ವಿಜ್ಞಾನದಲ್ಲಿ ಮಾಡಿದ ಸಾಧನೆ ವಿಶ್ವ ಮೆಚ್ಚುವಂತದ್ದು. ಅವರ ಜನ್ಮ ದಿನದ ಅಂಗವಾಗಿ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ಮತ್ತು ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಪ್ರದರ್ಶಿಸಲು ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಮೂಢನಂಬಿಕೆಗಳು ಹೆಚ್ಚಾಗುತ್ತಿವೆ. ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಯಾವುದೇ ವಿಷಯವನ್ನು ಪ್ರತ್ಯಕ್ಷವಾಗಿ ನೋಡಿ ಒಪ್ಪಿಕೊಳ್ಳಬೇಕು. ಜೀವನದ ಪ್ರತಿ ಕ್ಷಣದಲ್ಲಿಯೂ ವಿಜ್ಞಾನವಿರುತ್ತದೆ. ಇದನ್ನು ಅರಿತುಕೊಂಡು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಎಪಿಎಸ್ ವಿದ್ಯಾಸಂಸ್ಥೆ ಆಡಳಿತ ಮಂಡಳಿಯ ರಾಜಣ್ಣ ಮಾತನಾಡಿ, ಶಾಲೆಯ ಎಲ್ಲಾ ವಿದ್ಯಾರ್ಥಿಗಳು ವಿವಿಧ ಪ್ರಾತ್ಯಕ್ಷಿಕೆಗಳನ್ನು ಸಿದ್ಧಪಡಿಸಿ ಅವುಗಳ ಬಗ್ಗೆ ಪರಿಚಯ ಮಾಡುವ ಮೂಲಕ ಉತ್ತಮ ಪ್ರಯತ್ನ ಮಾಡಿದ್ದಾರೆ ಎಂದರು.

ವಿದ್ಯಾರ್ಥಿಗಳು ನೂರಕ್ಕೂ ಹೆಚ್ಚು ವಿಜ್ಞಾನದ ಮಾದರಿಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳು, ಪೋಷಕರು ಪ್ರದರ್ಶನ ವೀಕ್ಷಿಸಿದರು. ಶಾಲಾ ಆಡಳಿತ ಮಂಡಳಿಯ ವೇಣುಗೋಪಾಲ್, ಮಂಜು, ದೀಪಾಶ್ರೀ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.