ದೇವನಹಳ್ಳಿ: ತಾಲ್ಲೂಕಿನ ಬೀರಸಂದ್ರದ ಜಿಲ್ಲಾಡಳಿತದ ಮುಂದೆ ಮಂಗಳವಾರ ಸಿಐಟಿಯು ವತಿಯಿಂದ ಸಂಘಟನೆ ವಲಯ, ಸರ್ಕಾರಿ ಯೋಜನಾ ಕಾರ್ಮಿಕರು, ಅಸಂಘಟಿತ ವಲಯಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ ನೀತಿ ಜಾರಿಗೆ ತರಬೇಕು. ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು. ಕೃಷಿ ಬೆಳೆಗಳಿಗೆ ಲಾಭದಾಯಕ ಬೆಲೆ ನೀಡಬೇಕು. ಸಾರ್ವಜನಿಕ ಕ್ಷೇತ್ರಗಳಲ್ಲಿ ಖಾಸಗೀಕರಣ ನಿಲ್ಲಿಸಬೇಕು. ಹೊಸ ಶಿಕ್ಷಣ ನೀತಿ ರದ್ದು ಮಾಡಬೇಕು ಎಂದು ಆಗ್ರಹಿಸಲಾಯಿತು.

ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ವೈಜ್ಞಾನಿಕ ಕನಿಷ್ಠ ವೇತನ ನಿಗದಿಗೊಳಿಸಬೇಕು. ವಾರಕ್ಕೆ ಗರಿಷ್ಠ 36 ಗಂಟೆ ಕೆಲಸವನ್ನು ಮಿತಿಗೊಳಿಸಬೇಕು. ಸಮಾನ ವೇತನ ನೀಡಿ ಗುತ್ತಿಗೆ, ಹೊರಗುತ್ತಿಗೆ, ಹಂಗಾಮಿ ನೌಕರರನ್ನು ರಕ್ಷಿಸಬೇಕು. ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಲಾಯಿತು.

ತಾಲ್ಲೂಕು ಮಟ್ಟದಲ್ಲಿ ಇಎಸ್‌ಐ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಬೇಕು. ಜಿಲ್ಲಾ ಮಟ್ಟದಲ್ಲಿ ಕಾರ್ಮಿಕ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ಸರ್ಕಾರಿ ಯೋಜನೆಗಳಲ್ಲಿ ಕೆಲಸ ಮಾಡುವವರನ್ನು ಕಾರ್ಮಿಕರೆಂದು ಪರಿಗಣಿಸಬೇಕು. ಅವರಿಗೆ ಕನಿಷ್ಠ ವೇತನ, ಸೇವಾ ಹಾಗೂ ನಿವೃತ್ತಿ ಸೌಲಭ್ಯಗಳನ್ನು ವಿಸ್ತರಿಸಬೇಕು ಎಂದು ಹಕ್ಕೋತ್ತಾಯ ಮಾಡಲಾಯಿತು.

ಕಟ್ಟಡ ಕಾರ್ಮಿಕರಿಗೆ ಮೀಸಲಾಗಿರುವ ಅನುದಾನವನ್ನು ಅವರಿಗಷ್ಟೇ ಉಪಯೋಗಿಸಬೇಕು. ಕಾರ್ಮಿಕ ಇಲಾಖೆಯಲ್ಲಿ ಬಾಕಿ ಇರುವ ನೂರಾರು ಪಿಂಚಣಿ, ಮದುವೆ, ಶೈಕ್ಷಣಿಕ, ವೈದ್ಯಕೀಯ ಮೊದಲಾದ ಅರ್ಜಿಗಳನ್ನು ಇತ್ಯರ್ಥಪಡಿಸಬೇಕು. ವಿಮಾ ಏಜೆಂಟರನ್ನು ಅಸಂಘಟಿತ ಕಾರ್ಮಿಕರೆಂದು ಗುರುತಿಸಬೇಕು ಎಂದು ತಿಳಿಸಲಾಯಿತು.

ಐಟಿಯು ಜಿಲ್ಲಾ ಸಮಿತಿ ಅಧ್ಯಕ್ಷ ಸಿ.ನರಸಿಂಹಮೂರ್ತಿ, ಉಪಾಧ್ಯಕ್ಷ ಪಿ.ಎ. ವೆಂಕಟೇಶ್, ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಲ್.ಆರ್ ನಳಿನಾಕ್ಷಿ, ರೈತ ಮುಖಂಡ ಆರ್.ಚಂದ್ರತೇಜಸ್ವಿ, ಶಂಬಣ್ಣ, ವೆಂಕಟರಾಜು, ವಿಷಕಂಠ, ಅಂಗನವಾಡಿ ನೌಕರರ ಸಂಘದ ಸುಮಾ, ನಿರ್ಮಲ, ಪುಷ್ಪ, ಅನಸೂಯಾ, ಕಲಾ, ಶಾರದಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.