ದೇವನಹಳ್ಳಿ: ಲೋಕಸಭಾ ಚುನಾವಣೆ ಘೋಷಣೆಯಾದ ಬೆನ್ನಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎನ್.ಅನುರಾಧ ಅವರ ವಿರುದ್ಧ ಚುನಾವಣಾ ಆಯೋಗದಲ್ಲಿ ದೂರು ದಾಖಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಆಪ್ತ ಕಾರ್ಯದರ್ಶಿ ಪತ್ನಿಯಾಗಿರುವ ಅನುರಾಧ, ಸಚಿವರ ಸಂಬಂಧಿಯೂ ಆಗಿದ್ದಾರೆ. ಅವರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರ ಅಧಿಕಾರಿಗಳು ಕೆಲಸ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಯಲಹಂಕದ ವಕೀಲ ಜಿ.ಎನ್.ವೆಂಕಟರಮಣಪ್ಪ ದೂರು ನೀಡಿದ್ದಾರೆ.

ಅನುರಾಧ ಅವರನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬೇರೆಡೆಗೆ ವರ್ಗಾವಣೆ ಮಾಡಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ. ಚುನಾವಣೆ ಆಯೋಗ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.