ದೇವನಹಳ್ಳಿ: ಕಾಂಗ್ರೆಸ್ ನಾಯಕ, ಮಾಜಿ ಶಾಸಕ ವೆಂಕಟಸ್ವಾಮಿ ಅವರು ತೀವ್ರ ಹೃದಯಾಘಾತದಿಂದ ಶನಿವಾರ ಮುಂಜಾನೆ ನಿಧನರಾಗಿದ್ದಾರೆ.

ಅವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳು ಇದ್ದಾರೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರ ದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ.

ಶುಕ್ರವಾರ ತಡರಾತ್ರಿ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮುಂಜಾನೆ ನಿಧನರಾದರು.

ಕಳೆದ ಒಂದು ತಿಂಗಳಲ್ಲಿ ಎರಡು ಬಾರಿ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಖಾಸಗಿ ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆದಿದ್ದರು.

ಕೆಲವು ದಿನಗಳ ಹಿಂದೆ ಆಸ್ಪತ್ರೆಯಿಂದ ಮರಳಿದ್ದ ಅವರು ಚುನಾವಣೆ ಕೆಲಸದಲ್ಲಿ ಸಕ್ರಿಯರಾಗಿದ್ದರು. ಶುಕ್ರವಾರ ರಾತ್ರಿ ಮತ್ತೆ ಮೂರನೇ ಬಾರಿ ಎದೆ ನೋವು ಕಾಣಿಸಿಕೊಂಡಿತ್ತು.

ಕಾಂಗ್ರೆಸ್ ಮುಖಂಡರಾದ ಡಿ.ಕೆ.ಶಿವಕುಮಾರ್, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಕೆ.ಎಚ್.ಮುನಿಯಪ್ಪ ಅಂತಿಮ ನಮನ ಸಲ್ಲಿಸಿದರು. ಸಂಜೆ ಸಾದಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಓದಿ... ಕಾಂಗ್ರೆಸ್ ಮೂರನೇ ಪಟ್ಟಿ ಪ್ರಕಟ: ಕೋಲಾರಕ್ಕೆ ಕೊತ್ತೂರು ಮಂಜುನಾಥ್ ಅಭ್ಯರ್ಥಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.