ಆನೇಕಲ್: ಸೈಬರ್ ಅಪರಾಧಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ಗುಪ್ತಚರ ಇಲಾಖೆ ಮತ್ತು ಆನೇಕಲ್ ಪೊಲೀಸ್ ಉಪ ವಿಭಾಗದ ಪೊಲೀಸರು ಶುಕ್ರವಾರ ರಾತ್ರಿಯಿಂದ ಪಟ್ಟಣದಲ್ಲಿ ವಾಸವಾಗಿರುವ ದಂಪತಿಯ ವಿಚಾರಣೆ ನಡೆಸುತ್ತಿದ್ದಾರೆ.

ಉದ್ಯೋಗದ ನಿಮಿತ್ತ ಆನೇಕಲ್ನಲ್ಲಿರುವ ಉತ್ತರ ಕರ್ನಾಟಕದ ದಂಪತಿ ಪಟ್ಟಣದ ಕೃಷಿ ಇಲಾಖೆ ಸಮೀಪದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಾರೆ.

ಸುಮಾರು 20ಕ್ಕೂ ಹೆಚ್ಚು ಪೊಲೀಸರು ಶುಕ್ರವಾರ ರಾತ್ರಿ 10ಗಂಟೆಯಿಂದ ಶನಿವಾರದವರೆಗೂ ವಿಚಾರಣೆ ನಡೆಸಿದ್ದಾರೆ. ಸೈಬರ್ ಅಪರಾಧಕ್ಕೆ ಸಂಬಂಧಿಸಿದಂತೆ ಈ ತನಿಖೆ ನಡೆದಿದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ. ತನಿಖೆ ಇನ್ನೂ ಪ್ರಗತಿಯಲ್ಲಿರುವ ಕಾರಣ ಮಾಹಿತಿ ನೀಡಲು ಪೊಲೀಸ್ ಅಧಿಕಾರಿಗಳು ನಿರಾಕರಿಸಿದ್ದಾರೆ.

ಬೆಂಗಳೂರು ಮತ್ತು ಆನೇಕಲ್ ಸುತ್ತಮುತ್ತಲಿನ ಶಾಲೆಗಳಿಗೆ ಶುಕ್ರವಾರ ಹುಸಿ ಬಾಂಬ್ ಬೆದರಿಕೆ ಇ–ಮೇಲ್ ಸಂದೇಶ ಕಳಿಸಿದ ಐ.ಪಿ ವಿಳಾಸ ಆನೇಕಲ್ನಲ್ಲಿ ಪತ್ತೆಯಾಗಿದೆ ಎಂಬ ವದಂತಿ ದಟ್ಟವಾಗಿದೆ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿಯ ವಿಚಾರಣೆ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಸೈಬರ್ ಅಪರಾಧ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಚುಟುಕಾಗಿ ಉತ್ತರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.