ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ಭಾನುವಾರ 44 ವಿಮಾನಗಳ ಸಂಚಾರ ವ್ಯತ್ಯಯವಾಗಿದೆ.

ವಿಮಾನ ನಿಲ್ದಾಣದ ಸುತ್ತಮುತ್ತ ಮುಂಜಾನೆ ದಟ್ಟವಾದ ಮಂಜು ಕವಿದಿದ್ದರಿಂದ ರನ್ ವೇ ಗೋಚರಿಸುತ್ತಿರಲಿಲ್ಲ. ಇದರಿಂದ ಬೆಳಗಿನ ಜಾವ 3 ಗಂಟೆಯಿಂದ 8.30ರವರೆಗೂ ಯಾವ ವಿಮಾನವೂ ಹಾರಾಟ ನಡೆಸಲಿಲ್ಲ. ದೆಹಲಿಗೆ ತೆರಳಬೇಕಿದ್ದ ಏಳು ವಿಮಾನಗಳು ತಡವಾಗಿ ಸಂಚರಿಸಿದವು ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ.

ಬೆಂಗಳೂರಿನಿಂದ ತೆರಳಬೇಕಿದ್ದ ಹೆಚ್ಚಿನ ವಿಮಾನಗಳು ನಿಗದಿತ ಸಮಯಕ್ಕಿಂತ ಬಹಳ ತಡವಾಗಿ ಸಂಚರಿಸಿದ್ದರಿಂದ ಪ್ರಯಾಣಿಕರು ಸಂಕಷ್ಟಕ್ಕೆ ಒಳಗಾದರು. ಎರಡೂ ಟರ್ಮಿನಲ್‌ಗಳಲ್ಲಿ ಪ್ರಯಾಣಿಕರ ದಟ್ಟಣೆ ಕಂಡುಬಂತು.

ಹೈದರಾಬಾದ್‌ನಿಂದ ಬೆಂಗಳೂರಿಗೆ ಮಾರ್ಗ ಬದಲಾವಣೆ ಮಾಡಿದ ವಿಮಾನಗಳು ಸಹ ರನ್ ವೇ ಗೋಚರಿಸದೆ ಕೆಲ ಹೊತ್ತು ವಿಮಾನ ನಿಲ್ದಾಣದ ಸುತ್ತ ಸುತ್ತಬೇಕಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.