ವಿಜಯಪುರ (ದೇವನಹಳ್ಳಿ): ‘ಬಿಜೆಪಿ ಸಂಸದನಾಗಿದ್ದರೂ ಕೇಂದ್ರದಿಂದ ಕ್ಷೇತ್ರಕ್ಕೆ ಅನುದಾನ ತರಲು ಐದು ವರ್ಷದಲ್ಲಿ ತುಂಬಾ ಕಷ್ಟಪಡಬೇಕಾಯಿತು. ಸಾಕಷ್ಟು ಪರಿಶ್ರಮದಿಂದ ಅನುದಾನ ತಂದು ಕ್ಷೇತ್ರದಲ್ಲಿ ಕೆಲಸಗಳು ಮಾಡಬೇಕಾಯಿತು’ ಎಂದು ಹಿರಿಯ ರಾಜಕಾರಣಿ ಬಿ.ಎನ್.ಬಚ್ಚೇಗೌಡ ಹೇಳಿದ್ದಾರೆ.

ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಇದೇ ಪರಿಸ್ಥಿತಿ ಮುಂದುವರೆದರೆ ಯುವಕರ ಸ್ಥಿತಿ ಏನಾಗಲಿದೆ ಎನ್ನವ ಆತಂಕ ಕಾಡುತ್ತಿದೆ. 62 ಸ್ಥಾನಗಳಿಗೆ ಅರ್ಜಿ ಆಹ್ವಾನಿಸಿದರೆ 70 ಸಾವಿರ ಅರ್ಜಿ ಬರುತ್ತವೆ ಎಂದು ಕಳವಳ ವ್ಯಕ್ತಪಡಿಸಿದರು.

‘ನಾನು ರಾಜಕೀಯದಿಂದ ನಿವೃತ್ತಿ ಪಡೆದಿದ್ದೇನೆ. ಮುಂದಿನ ದಿನಗಳಲ್ಲಿ ಯಾವ ಪಕ್ಷದೊಂದಿಗೂ ಕೆಲಸ ಮಾಡುವುದಿಲ್ಲ. ನನ್ನನ್ನು ಯಾವ ಪಕ್ಷದ ಮುಖಂಡರೂ ಸಂಪರ್ಕ ಮಾಡಿಲ್ಲ. ನಾನು ಯಾರ ಪರವಾಗಿಯೂ ಕೆಲಸ ಮಾಡಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.