ದೇವನಹಳ್ಳಿ: ‘ಕೋವಿಡ್-19 ಲಾಕ್‌ಡೌನ್ ಹಿನ್ನೆಲೆಯಲ್ಲಿ ದೇಶಾದ್ಯಂತ ವಿಮಾನಯಾನ ಸಂಪರ್ಕ ಸ್ಥಗಿತಗೊಳಿಸಲಾಗಿತ್ತು. ಅನಿವಾಸಿ ಭಾರತೀಯರ ಆಗಮನಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದ ಹಿನ್ನೆಲೆಯಲ್ಲಿ ಲಂಡನ್‌ನಲ್ಲಿ ಅನಿವಾಸಿ 326 ಭಾರತೀಯರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುಂಜಾನೆ ಬಂದು ಇಳಿದಿದ್ದಾರೆ’ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ, ‘ಆರೋಗ್ಯ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ಪ್ರಯಾಣಿಕರ ಕೋವಿಡ್-19 ಆರೋಗ್ಯ ತಪಾಸಣೆಗಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗತ್ಯ ಸಕಲ ಸಿದ್ದತೆ ಮಾಡಿಕೊಳ್ಳಲಾಗಿತ್ತು. ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರತಿಯೊಬ್ಬರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಪ್ರತಿಯೊಬ್ಬ ಪ್ರಯಾಣಿಕ 14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರುವುದು ಕಡ್ಡಾಯ. ಕ್ವಾರಂಟೈನ್ ಅವಧಿ ಮುಗಿದ ನಂತರ ತಮ್ಮ ಕುಟುಂಬವನ್ನು ಸೇರಿಕೊಳ್ಳಲಿದ್ದಾರೆ’ ಎಂದು ಹೇಳಿದರು.

‘ಪ್ರತಿಯೊಬ್ಬರಿಗೂ ತಪಾಸಣೆ ನಡೆಸಿದ ನಂತರ ಬಿಎಂಟಿಸಿ ಬಸ್ಸುಗಳ ಮೂಲಕ ಬೆಂಗಳೂರು ನಗರದ ವಿವಿಧ ಹೋಟೆಲ್ ಮತ್ತು ರೆಸಾರ್ಟ್‌ಗಳಲ್ಲಿ ಕ್ವಾರೆಂಟೈನ್‌ಗೆ ವ್ಯವಸ್ಥೆ ಮಾಡಲಾಗಿದೆ. ವಿದೇಶದಿಂದ ಬರುವ ಪ್ರಯಾಣಿಕರಿಗೆ ಈಗಾಗಲೇ 18 ಪಂಚತಾರ, 26 ಸ್ಟಾರ್ 40 ಸಾಧಾರಣ ಹೋಟಲ್ ಹಾಗೂ ರೆಸಾರ್ಟ್ ಬಳಸಲಾಗುತ್ತಿದೆ. ಕ್ವಾರೆಂಟೈನ್ ಸ್ಥಳ ಮತ್ತು ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ, ಕ್ವಾರಂಟೈನ್ ವೆಚ್ಚವನ್ನು ಪ್ರಯಾಣಿಕರೇ ಭರಿಸಲಿದ್ದಾರೆ’ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.