ದೊಡ್ಡಬಳ್ಳಾಪುರ: ಕನ್ನಡ ಭಾಷೆ ಮತ್ತು ಸಾಹಿತ್ಯದ ಅನನ್ಯತೆ ಉಳಿಸುವ, ಬೆಳೆಸುವ ಮಹಾದಾಸೆಯಿಂದ ಸ್ವಾತಂತ್ರ್ಯ ಪೂರ್ವದಲ್ಲೆ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆಯಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಹೇಳಿದರು.

ಡಾ.ರಾಜ್ಕುಮಾರ್ ಕಲಾಮಂದಿರದಲ್ಲಿ ಭಾನುವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನ್ನಡ ಭಾಷಿಕರು ಆಡಳಿತಾತ್ಮಕವಾಗಿ ಬೇರೆ ಭಾಷೆಯ ಆಡಳಿತ ಅಧೀನದಲ್ಲಿದ್ದರೂ ಅವರನ್ನು ಭಾಷೆ ಮತ್ತು ಸಾಹಿತ್ಯ ಬಾಂಧವ್ಯದಿಂದ ಒಗ್ಗೂಡಿಸಿ ಕನ್ನಡ ಕಟ್ಟುವ ಕೆಲಸಕ್ಕೆ ಕಸಾಪ ಸಹಕಾರಿಯಾಗಿದೆ. ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಕನಾಟಕ ಸಾಹಿತ್ಯ ಪರಿಷತ್ತು ಸ್ಥಾಪಿಸಿ, ಕನ್ನಡ ಕಟ್ಟುವ ಕೆಲಸಕ್ಕೆ ಅಡಿಗಲ್ಲು ಹಾಕಿದರು ಎಂದು ಸ್ಮರಿಸಿದರು.

ಪರಿಷತ್ ಕನ್ನಡದ ಮಹತ್ವದ ಕವಿಗಳ ಕೃತಿಗಳ ಹಕ್ಕು ಸ್ವಾಮ್ಯ ಹೊಂದಿದೆ. ಕನ್ನಡ ನಿಘಂಟು ರಚನೆ ಮತ್ತು ಪರಿಷ್ಕರಣೆಯಲ್ಲಿ ಮಹತ್ವದ ಸಾಧನೆ ಮಾಡಿದೆ. ಉತ್ತಮ ಗ್ರಂಥಾಲಯ ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭಾಷೆಯ ಬೆಳವಣಿಗೆಗೆ, ಅಧ್ಯಯನ ಮತ್ತು ಸಂಶೋಧನೆಗೆ ಸಹಕಾರಿಯಾಗಿದೆ ಎಂದರು.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ಮಾತನಾಡಿ, ಕಸಾಪ ಸ್ಥಾಪಕ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕನಸು ನನಸು ಮಾಡುವ ಕೆಲಸವನ್ನು ಪರಿಷತ್ತು ಮುಂದೂವರಿಸಿಕೊಂಡು ಹೋಗಬೇಕು. ಕನ್ನಡದ ವಿಚಾರಗಳ ಬಗ್ಗೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಹೇಳಿದರು.

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಹತ್ವದ ಪಾತ್ರವನ್ನು ವಹಿಸಬೇಕಾಗಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಗೋವಿಂದರಾಜು, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪರಿಷತ್ನ ಸದಸ್ಯರಾದ ಪ್ರಮೀಳಾ ಮಹಾದೇವ್ ಕವಯಿತ್ರಿ ಆಶಾಗುಡ್ಡದಹಳ್ಳಿ, ವಿ.ಎಸ್.ಹೆಗಡೆ, ಪ್ರತಿನಿಧಿ ಷಫೀರ್, ನಾಗದಳ ಸಂಘಟನೆಯ ನಟರಾಜ್, ಕನ್ನಡ ಜಾಗೃತ ವೇದಿಕೆ ಅಧ್ಯಕ್ಷ ನಾಗರಾಜ್, ಬಾಶೆಟ್ಟಿಹಳ್ಳಿ ಪ್ರೇರಣಾ ಸಂಸ್ಥೆಯ ಅಧ್ಯಕ್ಷೆ ನೇತ್ರಾವತಿ, ಪ್ರತಿನಿಧಿ ಮುನಿರತ್ನಮ್ಮ, ಡಾ.ರಾಜ್ ಕುಮಾರ್ ಅಭಿಮಾನಿ ಸಂಘದ ಪರಮೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.