ದೊಡ್ಡಬಳ್ಳಾಪುರ: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನಾಗಸಂದ್ರ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲೇ ಮನೆ ಬಾಗಿಲಿನ ಬೀಗ ಮುರಿದು ಕಳ್ಳರು ಚಿನ್ನಾಭರಣ, ನಗದು ದೋಚಿದ್ದಾರೆ.

ನಾಗಸಂದ್ರ ಗ್ರಾಮದ ಆನಂದ್ ಹಾಗೂ ಅವರ ಪತ್ನಿ ಇಬ್ಬರು ಸಹ ನಗರದಲ್ಲಿನ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಮನೆ ಬಾಗಿಲಿನ ಬೀಗ ಮುರಿದು ಒಳಗೆ ನುಗ್ಗಿರುವ ಕಳ್ಳರು ಉಂಗುರ, ಓಲೆ, ಕೊರಳಿನ ಸರ ಸೇರಿದಂತೆ ಸುಮಾರು ₹1 ಲಕ್ಷ ಮೌಲ್ಯದ ಚಿನ್ನಾಭರಣ, ಸುಮಾರು ₹25 ಸಾವಿರ ಬೆಲೆ ಬಾಳುವ ಬೆಳ್ಳಿ ಸಾಮಗ್ರಿ ಕಳವು ಮಾಡಿದ್ದಾರೆ.

ಚಿನ್ನಾಭರಣದ ವಸ್ತುಗಳು ಇಟ್ಟಿದ್ದ ಪರ್ಸ್ಗಳನ್ನು ಮನೆಯಿಂದ ಸ್ವಲ್ಪ ದೂರದಲ್ಲಿಯೇ ಬಿಸಾಡಿ ಹೋಗಿದ್ದಾರೆ. ಮಧ್ಯಾಹ್ನ ಊಟಕ್ಕೆ ಮನೆಗೆ ಬಂದಾಗ ಕಳವು ನಡೆದಿರುವುದು ಗಮನಕ್ಕೆ ಬಂದಿದೆ.

ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಬ್ಇನ್ಸ್ಪೆಕ್ಟರ್ ಪಂಕಜ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವಾಲಯದಲ್ಲಿ ಕಳವು

ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಾಗರಕೆರೆ ಏರಿ ಮೇಲಿನ ಆಂಜನೇಯಸ್ವಾಮಿ ದೇವಾಲಯದ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಮಂಗಳವಾರ ರಾತ್ರಿ ಹುಂಡಿ ಹೊಡೆದು ಹಣ ದೋಚಿದ್ದಾರೆ. ಇದರೊಂದಿಗೆ ದೇವಾಲಯದ ಗರ್ಭಗುಡಿಯಲ್ಲಿದ್ದ ಸಾವಿರಾರು ರೂಪಾಯಿ ಬೆಲೆ ಬಾಳುವ ತೂಗು ದೀಪಗಳು ಬೆಳ್ಳಿ ಕಿರಿಟವನ್ನು ಕಳವು ಮಾಡಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.