ಆನೇಕಲ್: ಶಿಕ್ಷಣದಿಂದ ಒಂದು ಸಮಾಜದ ಬದಲಾವಣೆ ಸಾಧ್ಯ. ಹಾಗಾಗಿ ಪ್ರತಿಯೊಂದು ಮಗುವು ಶಿಕ್ಷಣ ಪಡೆಯುವಂತಾಗಬೇಕು. ಶಿಕ್ಷಣ ಸೇವಾ ಕಾರ್ಯದಲ್ಲಿ ಸರ್ಕಾರದ ಜೊತೆಗೆ ಸಂಘ ಸಂಸ್ಥೆಗಳು ಕೈಜೋಡಿಸಬೇಕು ಎಂದು ಪ್ರಜಾ ವಿಮೋಚನಾ ಚಳವಳಿ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಆನೇಕಲ್ ಕೃಷ್ಣಪ್ಪ ತಿಳಿಸಿದರು.

ಅವರು ತಾಲ್ಲೂಕಿನ ಹುಲಿಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಹಾಗೂ ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆತರೆ ಬಡವರ ಅಭಿವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹವನ್ನು ನೀಡಬೇಕು. ಪರಿಸರ ಸಂರಕ್ಷಣೆ, ಮಳೆ ನೀರು ಕೊಯ್ಲು, ವೈಜ್ಞಾನಿಕ ಮನೋಭಾವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು ಎಂದರು.

ಸಂಘಟನೆಯು ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಾಧ್ಯವಾದ ನೆರವು ನೀಡಲಿದೆ. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಸಂಘಟನೆಯು ಇಲಾಖೆಯೊಂದಿಗೆ ಕೆಲಸ ಮಾಡಲಿದೆ ಎಂದರು.

ಮುಖಂಡರಾದ ಕೊಪ್ಪಮುನಿರಾಜು, ಹುಲಿಮಂಗಲ ರವಿಕುಮಾರ್, ಕೊಪ್ಪ ರಾಮಾಂಜಿ, ಯಡವನಹಳ್ಳಿ ಕೃಷ್ಣಪ್ಪ, ಸಬ್‌ಮಂಗಲ ರವಿ, ಕೊಪ್ಪ ರವಿ, ರಘುನಾಥ್, ವ್ರಜಪ್ಪ, ಲಘುಮಯ್ಯ, ರಾಜಣ್ಣ, ಗೋಪಿ, ವಿಜಯ್‌ಕುಮಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.