ದೇವನಹಳ್ಳಿ: ಜಿಲ್ಲೆಯ 4 ತಾಲೂಕುಗಳಲ್ಲಿರುವ ಮತದಾರರ ಪೈಕಿ ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಮತದಾರರೇ ಇದ್ದಾರೆ ಎಂದು ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರವ ಎನ್.ಶಿವಶಂಕರ್ ತಿಳಿಸಿದರು.

ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ನಡೆದ ರಾಜಕೀಯ ಪಕ್ಷಗಳ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮತದಾರರ ಲಿಂಗಾನುಪಾತದಲ್ಲಿ ಒಂದು ಸಾವಿರ ಪುರುಷರಿಗೆ 1,016 ಮಹಿಳೆಯರಿದ್ದಾರೆ. ಅದರಲ್ಲಿ ದೊಡ್ಡಬಳ್ಳಾಪುರದಲ್ಲಿ 1,011, ಹೊಸಕೋಟೆಯಲ್ಲಿ 1,013, ದೇವನಹಳ್ಳಿ 1,013 ಹಾಗೂ ನೆಲಮಂಗಲದಲ್ಲಿ ಅತಿ ಹೆಚ್ಚು 1,025 ಲಿಂಗಾನುಪಾತ ಕಂಡುಬಂದಿದೆ ಎಂದು ತಿಳಿಸಿದರು.

ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. 4,38,024 ಪುರುಷರು, 4,46, 904 ಮಹಿಳಾ ಮತದಾರರು, 140 ಇತರೆ ಮತದಾರರು ಸೇರಿ ಒಟ್ಟು 8,85,068 ಮತದಾರರಿದ್ದಾರೆ. ಒಟ್ಟು ಮತದಾರರ ಸಂಖ್ಯೆಯಲ್ಲಿ 18 ರಿಂದ 19 ವರ್ಷದೊಳಗಿನ 19,090 ಯುವ ಮತದಾರರು, 80 ವರ್ಷ ಮೇಲ್ಪಟ್ಟ 21,425 ಹಿರಿಯ ಮತದಾರರು , 12,417 ಅಂಗವಿಕಲ ಮತದಾರರು ಹಾಗೂ 124 ಸೇವಾ ಮತದಾರರು ಇದ್ದಾರೆ ಎಂದು ತಿಳಿಸಿದರು.

ಪ್ರಸಕ್ತ 2024ರ ವಾರ್ಷಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ 1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಮತ್ತು 1ನೇ ಅಕ್ಟೋಬರ್-2024ಕ್ಕೆ 18 ವರ್ಷ ತುಂಬುವ ಯುವ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸಲು ಅವಕಾಶವಿದೆ. ಇದರಿಂದ ನೋಂದಣಿಗಾಗಿ ಮುಂದಿನ ವರ್ಷದ ವಿಶೇಷ ಪರಿಷ್ಕರಣೆಗೆ ಕಾಯುವುದನ್ನು ತಪ್ಪಿಸಲಾಗಿದೆ. ಮಧ್ಯಂತರ ಅವಧಿಯಲ್ಲಿ ನಡೆಯುವ ಚುನಾವಣೆಗಳಲ್ಲಿ ಮತಚಲಾವಣೆಗೆ ಅವಕಾಶ ದೊರೆಯಲಿದೆ. ಮತದಾರರ ಗುರುತಿನ ಚೀಟಿಯನ್ನು ಸಂಬಂಧಪಟ್ಟ ಮತದಾರರಿಗೆ ನೇರವಾಗಿ ಅಂಚೆ ಮೂಲಕ ಕಳುಹಿಸಲಾಗುವುದು ಎಂದು ತಿಳಿಸಿದರು.

ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು, ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು, ಬೂತ್ ಲೆವೆಲ್ ಏಜೆಂಟ್ ನೇಮಿಸಲು ಅಗತ್ಯ ಕ್ರಮಕೈಗೊಳ್ಳಬೇಕಾಗಿದೆ ಎಂದರು.

ದೊಡ್ಡಬಳ್ಳಾಪುರ;1,07,403; 1,09,420; 2,16,824

ಹೊಸಕೋಟೆ;1,17,071; 1,18,81; 2,35,907

ದೇವನಹಳ್ಳಿ;1,05,753; 1,07,640; 2,13,408

ನೆಲಮಂಗಲ; 1,07,797; 1,11,029; 2,18,929

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.