ದೊಡ್ಡಬಳ್ಳಾಪುರ: ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ವಕೀಲರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಸೋಮವಾರ ವಕೀಲರು ಕೋರ್ಟ್ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ನ್ಯಾಯಾಲಯಗಳು ನೀಡುವ ಆದೇಶವನ್ನು ಟೀಕಿಸುವ ಹಕ್ಕು ಇದೆ. ಆದರೆ ಟೀಕೆಗಳು ಅದು ಕಾನೂನು ವ್ಯಾಪ್ತಿಯನ್ನು ಮೀರಿರಬಾರದು. ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಂಚಿಕೊಂಡವರು ತಪ್ಪು ಮಾಡಿದ್ದರೆ ಅವರ ವಿರುದ್ಧ ಕೇಸು ದಾಖಲು ಮಾಡಬೇಕಿತ್ತು. ಬದಲಿಗೆ ಇಡೀ ವಕೀಲ ಸಮುದಾಯದ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ ಎಂದು ಹಿರಿಯ ವಕೀಲ ರುದ್ರಾರಾಧ್ಯ ಅಸಮಾಧಾನ ವ್ಯಕ್ತಪಡಿಸಿದರು.

ವಕೀಲರ ಮೇಲೆ ಪ್ರಕರಣ ದಾಖಲಿಸಿದ ಅಧಿಕಾರಿಯನ್ನು ಈ ಕೂಡಲೇ ವಜಾ ಮಾಡಬೇಕು. ಸಾಮರಸ್ಯ ಕಾಪಾಡಬೇಕು, ಜಿಲ್ಲಾಡಳಿತ ಮಧ್ಯೆ ಪ್ರವೇಶ ಮಾಡಿ ಸೂಕ್ತ ತನಿಖೆ ನಡೆಸಿ ಪ್ರಕರಣವನ್ನು ಶಾಂತ ರೀತಿಯಲ್ಲಿ ಬಗೆ ಹರಿಸಬೇಕು ಎಂದು ಅವರು ಒತ್ತಾಯಿಸಿದರು.

ವಕೀಲರ ರಕ್ಷಣಾ ಕಾಯ್ದೆ ಜಾರಿಯಾದರೂ ವಕೀಲರ ಮೇಲಿನ ದೌರ್ಜನ್ಯ ನಿಲ್ಲುತ್ತಿಲ್ಲ, ಪೊಲೀಸರು 40 ವಕೀಲರ ಮೇಲೆ ಎಫ್‌ಐಆರ್ ದಾಖಲು ಮಾಡಿದ್ದಾರೆ. ಪೊಲೀಸರ ಈ ನಿಲುವನ್ನು ಖಂಡಿಸಿ ರಾಜ್ಯದಾದ್ಯಂತ 190 ತಾಲ್ಲೂಕುಗಳ ವಕೀಲರ ಸಂಘಗಳು ಇಂದು ಕೋರ್ಟ್ ಕಲಾಪ ಬಹಿಷ್ಕರಿಸಿ ಮಾಡಿ ಪ್ರತಿಭಟನೆ ನಡೆಸಿವೆ ಎಂದು ವಕೀಲರ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ ತಿಳಿಸಿದರು.

ಸಂಘದ ತಾಲ್ಲೂಕು ಉಪಾಧ್ಯಕ್ಷ ಎಂ.ಆರ್.ಸುರೇಶ್, ನಿರ್ದೇಶಕರಾದ ಆರ್.ಪ್ರಭಾಕರ್. ಎನ್.ಲೀಲಾವತಿ ನಾಝಿಮ್, ಮಮ್ತಾಜ್ ಅನಿತ, ಶಿವಣ್ಣ, ಚಂದೇಶ್, ಮೋಹನ್ ಕುಮಾರ್, ಪ್ರವೀಣ್ ಕುಮಾರ್ ಗುಪ್ತಾ, ಉಮೇಶ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.