ತೂಬಗೆರೆ(ದೊಡ್ಡಬಳ್ಳಾಪುರ):  ಇತಿಹಾಸ ಪ್ರಸಿದ್ಧ ಘಾಟಿ ಕ್ಷೇತ್ರದಲ್ಲಿ ಕುಮಾರ ಷಷ್ಠಿ ಅಂಗವಾಗಿ ಗುರುವಾರ ಸಂಜೆ ಸುಬ್ರಹ್ಮಣ್ಯ ಸ್ವಾಮಿ ತೆಪ್ಪೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ಕಲ್ಯಾಣಿಯನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ತೆಪ್ಪೋತ್ಸವ ಪ್ರಯುಕ್ತ ಭರತ ನಾಟ್ಯ, ಸುಗಮ ಸಂಗೀತ ಕಾರ್ಯಕ್ರಮ ನಡೆದವು. ತುಳು ಷಷ್ಠಿಯಂದು ಬ್ರಹ್ಮ ರಥೋತ್ಸವ ಮುಗಿದ ಒಂದು ತಿಂಗಳಿಗೆ ಬರುವ ಮಾಘ ಶುದ್ಧ ಪಂಚಮಿಯಂದು ತೆಪ್ಪೋತ್ಸವ ಆಚರಿಸುವುದು ವಾಡಿಕೆಯಾಗಿದೆ. ಜ. 27ರಂದು ಕುಮಾರ ಷಷ್ಠಿ ಅಂಗವಾಗಿ ಸ್ವಾಮಿಗೆ ವಿಶೇಷ ಅಲಂಕಾರ ಸಹ
ನಡೆಯಲಿದೆ.

ಗುರುವಾರ ಸಂಜೆ ಘಾಟಿ ಕ್ಷೇತ್ರದಲ್ಲಿ ಸ್ವಾಮಿಯ ಉತ್ಸವ ಮೂರ್ತಿಯನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ದೇವಾಲಯದ ಹೊರಭಾಗದಲ್ಲಿರುವ ಕಲ್ಯಾಣಿಯಲ್ಲಿ ತೆಪ್ಪೋತ್ಸವ ಕಾರ್ಯಕ್ರಮ ನಡೆಯಿತು.

ಸಾವಿರಾರು ಭಕ್ತರು ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದರು. ಭಕ್ತರಿಗೆ ದೇವಾಲಯದಿಂದ ಅಗತ್ಯ ಮೂಲ ಸೌಕರ್ಯ ಸೇರಿದಂತೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.

ಗುರುವಾರ ಗಣರಾಜ್ಯೋತ್ಸವ ಅಂಗವಾಗಿ ಸರ್ಕಾರಿ ರಜೆ ಇದ್ದುದ್ದರಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ತೆಪ್ಪೋತ್ಸವದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.