ವಿಜಯಪುರ(ದೇವನಹಳ್ಳಿ): ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಬಾಹಿರವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕಾರ್ಯವೈಖರಿ ವಿರುದ್ಧ ರಾಷ್ಟ್ರಪತಿಗೆ ದೂರು ಸಲ್ಲಿಸಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ನಡೆ ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ. ರಾಜ್ಯಪಾಲರ ಸಂವಿಧಾನಬಾಹಿರ ಕ್ರಮದ ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸುತ್ತಿದ್ದೇವೆ ಎಂದರು.

‘ನಿವೇಶನ ಹಂಚಿಕೆಯಂತಹ ಕ್ಷುಲ್ಲಕ ಕಾರಣ ಇಟ್ಟುಕೊಂಡು ಮುಖ್ಯಮಂತ್ರಿ ರಾಜೀನಾಮೆ ಕೇಳುವುದು ಸಮಂಜಸವಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವಂತಹ ತಪ್ಪು ಮಾಡಿಲ್ಲ. ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು ಎಂದು ಸಚಿವ ಸಂಪುಟ ಸಭೆಯಲ್ಲಿ ನಾವೆಲ್ಲರೂ ತೀರ್ಮಾನಿಸಿದ್ದೇವೆ’ ಎಂದು ಹೇಳಿದರು.

ಸಂವಿಧಾನ ಆಶಯಗಳಿಗೆ ದಕ್ಕೆಯಾಗಬಾರದು ಮತ್ತು ಪ್ರಜಾಪ್ರಭುತ್ವ ಉಳಿಯಬೇಕು ಎಂದು ನಿರಂತರ ಹೋರಾಟದ ಜೊತೆ ಕಾನೂನು ಹೋರಾಟವನ್ನೂ ಕೈಗೊಳ್ಳಲಿದ್ದೇವೆ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಬದ್ಧವಾಗಿ ರಾಜ್ಯದಲ್ಲಿ ರಚನೆ ಆಗಿರುವ ಸರ್ಕಾರವನ್ನು ಉರುಳಿಸಬೇಕೆಂದು ವಿರೋಧ ಪಕ್ಷಗಳು ಷಡ್ಯಂತ್ರ ಹೂಡಿವೆ. ಹಿಂದುಳಿದ ವರ್ಗದ ನಾಯಕ ಮುಖ್ಯಮಂತ್ರಿ ಆಗಿರುವುದು ಸಹಿಸಿಕೊಳ್ಳದ ವಿರೋಧ ಪಕ್ಷಗಳು ಕುತಂತ್ರ ನಡೆಸುತ್ತಿದ್ದಾರೆ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.