ಹೊಸಕೋಟೆ: ತಾಲ್ಲೂಕಿನ ತಿರುಮಶೆಟ್ಟಿಹಳ್ಳಿ ಕ್ರಾಸ್ ಬಳಿ ಇರುವ ಎಸ್.ಪಿ.ಜಿ ಆಸ್ಪತ್ರೆಯಲ್ಲಿ 16ರಿಂದ ರಿಂದ 17ವಾರಗಳ ಭ್ರೂಣ ಬುಧವಾರ ಪತ್ತೆಯಾಗಿದೆ. ಆಸ್ಪತ್ರೆ ಮಾಲೀಕ ಡಾ.ಶ್ರೀನಿವಾಸ್ ನಾಪತ್ತೆಯಾಗಿದ್ದಾರೆ. ರಾಜ್ಯದ ಕೆಲವಡೆ ಭ್ರೂಣ ಹತ್ಯೆ ಘಟನೆಗಳು ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ ಈ ಪ್ರಕರಣ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಆಸ್ಪತ್ರೆಯಲ್ಲಿ ಶೋಧ ಕಾರ್ಯ ನಡೆದಿದೆ. ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಸಿ.ಸುನೀಲ್ ಕುಮಾರ್, ಭ್ರೂಣ ಪತ್ತೆಯಾಗಿರುವ ಆಸ್ಪತ್ರೆಯನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಸ್ವಯಂ ಪ್ರೇರಿತವಾಗಿ ಭ್ರೂಣ ಪತ್ತೆ ತನಿಖೆ ನಡೆಸುತ್ತಿದ್ದು, ಈ ಸಂದರ್ಭದಲ್ಲಿ ಎಸ್.ಪಿ.ಜೆ ಆಸ್ಪತ್ರೆಯಲ್ಲಿ ಭ್ರೂಣ ಪತ್ತೆಯಾಗಿದೆ. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಡಿಎಚ್ಒ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.