ಹೊಸಕೋಟೆ: ಅಗತ್ಯ ಆಹಾರ ಪದಾರ್ಥಗಳನ್ನು ಭೂಮಿಯಲ್ಲಿಯೇ ಬೆಳೆಯಬೇಕೆ ಹೊರತು ಕೈಗಾರಿಕೆಗಳಲ್ಲ. ಕೃಷಿ ಭೂಮಿಯನ್ನು ಕೈಗಾರಿಕೆಗಳಿಗೆ ನೀಡುತ್ತಾ ಹೋದರೆ ಮುಂದೊಂದು ದಿನ ಜನ ಹಸಿವಿನಿಂದ ಸಾಯಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರ ಶೇಖರ್ ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರವು ತಾಲ್ಲೂಕಿನ ನಂದಗುಡಿ ಮತ್ತು ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿರುವ ಫಲವತ್ತಾದ ಕೃಷಿ ಭೂಮಿಯಲ್ಲಿ ಟೌನ್ಶಿಪ್ ನಿರ್ಮಿಸಲು ಹೊರಟಿರುವುದು ಖಂಡನೀಯ. ಇದು ಕೇವಲ ಹಸಿವಿನ ಪ್ರಶ್ನೆಯಲ್ಲ. ಈ ಭಾಗದ ರೈತರ ಬದುಕಿನ ಪ್ರಶ್ನೆಯಾಗಿದೆ ಎಂದು ಹೇಳೀದರು.

ಅಪಾರ ಸಂಖ್ಯೆಯ ರೈತರು ಈ ಭೂಮಿಯನ್ನು ನಂಬಿಕೊಂಡು ಬದುಕುತ್ತಿದ್ದಾರೆ. ರೈತರ ಹಿತದೃಷ್ಠಿಯಿಂದಲಾದರೂ ಸರ್ಕಾರ ಟೌನ್ಶಿಪ್ ಯೋಜನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಕೃಷಿ ಭೂಮಿಯನ್ನು ಕೈಗಾರಿಕೆ ನೀಡುವುದರಿಂದ ಆಹಾರ ಪದಾರ್ಥಗಳ ಉತ್ಪಾದನೆ ಕೊರತೆ ಎದುರಾಗಲಿದೆ. ಪದಾರ್ಥಗಳನ್ನು ಬೆಳೆಯಲು ಭೂಮಿ ಇಲ್ಲದಿದ್ದರೆ ಮುಂದಿನ ಪೀಳಿಗೆ ಆಹಾರ ಕೊರತೆ ಎದುರಿಸಬೇಕಾಗುತ್ತದೆ ಎಂದರು.

ಟೌನ್ಶಿಪ್ ನೆಪದಲ್ಲಿ ಸರ್ಕಾರ ಗೋಮಾಳ, ಕೆರೆ ಕಾಲುವೆಗಳನ್ನು ವಶಪಡಿಸಿಕೊಂಡು ರಿಯಲ್ ಎಸ್ಟೇಟ್ ಮಾಫಿಯಾಗಳಿಗೆ ಭೂಮಿ ಮಾರುವ ಮೂಲಕ ಹಣ ಲಪಟಾಯಿಸುವ ಹುನ್ನಾರ ಮಾಡುತ್ತಿದ್ದಾರೆ. ಕೃಷಿ ಭೂಮಿ ವಶಪಡಿಸಿಕೊಂಡು ರೈತರಿಗೆ ಅನ್ಯಾಯ ಮಾಡಿ ಶ್ರೀಮಂತ ಉದ್ಯಮಿಗಳಿಗೆ ಅನುಕೂಲ ಮಾಡುವ ಮೂಲಕ ರೈತರನ್ನು ಬೀದಿಗೆ ತಳ್ಳುವ ಯೋಜನೆ ಇದಾಗಿದೆ ಎಂದು ದೂರಿದರು.

ನಂದಗುಡಿ, ಸೂಲಿಬೆಲೆ ವ್ಯಾಪ್ತಿಯ 18,500 ಎಕರೆ ಭೂಸ್ವಾದೀನ ಪ್ರಕ್ರಿಯೆನ್ನು ಕೈ ಬಿಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದರು.

ಕರ್ನಾಟಕ ರಾಜ್ಯರೈತ ಸಂಘ ಹಸಿರು ಸೇನೆ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ರಾಜ್ಯ ಉಪಾಧ್ಯಕ್ಷ ಕೆಂಚೇಗೌಡ, ತಾಲ್ಲೂಕು ಅಧ್ಯಕ್ಷ ಹಕ್ಕಲೇಗೌಡ, ಗೌರವಾಧ್ಯಕ್ಷ ಬಚ್ಚೇಗೌಡ, ಉಪಾಧ್ಯಕ್ಷ ರಾಜಣ್ಣ, ಕಾರ್ಯಾಧ್ಯಕ್ಷ ಮುನಿರಾಜಪ್ಪ, ಪ್ರಧಾನ ಕಾರ್ಯದರ್ಶಿ ಸುರೇಶ್, ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ಹಾಗೂ ನಂದಗುಡಿ ಹಾಗೂ ಸೂಲಿಬೆಲೆ ಹೋಬಳಿ ಭಾಗದ ಗ್ರಾಮದ ರೈತರು ಹಾಜರಿದ್ದರು.

2.50 ಲಕ್ಷ ಎಕರೆ ಕೈಗಾರಿಕೆಗೆ

ಕಳೆದ 20 ವರ್ಷದಲ್ಲಿ 2.50 ಲಕ್ಷ ಎಕರೆ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಸರ್ಕಾರ ವಶಕ್ಕೆ ಪಡೆದಿದೆ. ಇದರಲ್ಲಿ ಎಷ್ಟು ಭೂಮಿಯನ್ನು ಕೈಗಾರಿಕೆಗೆ ಬಳಸಿದೆ ಎಂಬ ಮಾಹಿತಿಯನ್ನು ಸರ್ಕಾರ ಬಿಡುಗಡೆಗೊಳಿಸಬೇಕು. ಶೇ 75 ರಷ್ಟು ಭೂಮಿ ರಿಯಲ್ ಎಸ್ಟೇಟ್ ಆಗಿದೆ. ಈಗಿರುವಾಗ ರೈತರು ಯಾಕೆ ಕೈಗಾರಿಕೆಗೆ ಭೂಮಿ ಕೊಡಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ್ ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.