ದೊಡ್ಡಬೆಳವಂಗಲ (ದೊಡ್ಡಬಳ್ಳಾಪುರ): ತಾಲ್ಲೂಕಿನಲ್ಲೇ ಪ್ರಥಮ ಬಾರಿಗೆ ಕರ್ನಾಟಕ ಪಬ್ಲಿಕ್ ಶಾಲೆಯನ್ನು (ಕೆಪಿಎಸ್) ದೊಡ್ಡಬೆಳವಂಗಲದಲ್ಲಿ ಪ್ರಾರಂಭಿಸಲಾಗಿದೆ. ಇದಕ್ಕೆ ಅಗತ್ಯ ಇರುವ ಎಲ್ಲ ರೀತಿಯ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೈಯ್ಯಪ್ಪರೆಡ್ಡಿ ಹೇಳಿದರು.

ಈ ಕುರಿತು ಮಾಹಿತಿ ನೀಡಿ, ಪ್ರಾರಂಭವಾಗಿರುವ ಈ ಶಾಲೆಯಲ್ಲಿ 1 ರಿಂದ 12ರ ವರೆಗೂ ತರಗತಿಗಳು ನಡೆಯಲಿವೆ. ವಿಷಯವಾರು ಶಿಕ್ಷಕರು ಇರಲಿದ್ದಾರೆ. ಇಂಗ್ಲಿಷ್ ಮತ್ತು ಕನ್ನಡ ಮಾಧ್ಯಮ ಎರಡರಲ್ಲೂ ತರಗತಿಗಳು ಪ್ರತ್ಯೇಕವಾಗಿ ನಡೆಯಲಿವೆ ಎಂದರು.

ಈ ವರ್ಷದ ಶೈಕ್ಷಣಿಕ ವರ್ಷದಿಂದ ತಾಲ್ಲೂಕಿನ ತೂಬಗೆರೆ, ಕೊನಘಟ್ಟ, ಬಾಶೆಟ್ಟಿಹಳ್ಳಿ ಸರ್ಕಾರಿ ಶಾಲೆಗಳಲ್ಲೂ ಒಂದರಿಂದ 10ನೇ ತರಗತಿವರೆಗೂ ಇಂಗ್ಲಿಷ್ ಮಾಧ್ಯಮವನ್ನು ಆರಂಭಿಸಲಾಗಿದೆ. ಈಗಾಗಲೇ ಇಂಗ್ಲಿಷ್ ಮಾಧ್ಯಮದಲ್ಲಿ ಪಾಠ ಬೋಧನೆ ಮಾಡುವ ಸಮರ್ಥ ಶಿಕ್ಷಕರನ್ನು ಗುರುತಿಸಿ ತರಬೇತಿಗಳನ್ನು ನೀಡಲಾಗಿದೆ ಎಂದರು.

ಸರ್ಕಾರದ ಹೊಸ ಯೋಜನೆಯಡಿ ಪ್ರಾರಂಭಿಸಲಾಗಿರುವ ಶಾಲೆಯಲ್ಲಿ ಸಿಸಿ ಟಿವಿ ಕ್ಯಾಮೆರಾ, ಬೆಂಚುಗಳು, ಆಧುನಿಕ ಶೌಚಾಲಯ, ಶುದ್ಧ ಕುಡಿಯುವ ನೀರು ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಖಾಸಗಿ ಶಾಲೆಗಳಲ್ಲಿ ಇರುವಂತೆ ವಿಷಯವಾರು ಶಿಕ್ಷಕರನ್ನು ಸರ್ಕಾರ ನೀಡಿದೆ ಎಂದರು.

ಸರ್ಕಾರದಿಂದ ಶೂ, ಸಮವಸ್ತ್ರ, ವಿದ್ಯಾರ್ಥಿ ವೇತನ, ಮಧ್ಯಾಹ್ನ ಬಿಸಿಯೂಟ, ಉಚಿತ ಸೈಕಲ್ ಎಲ್ಲವೂ ದೊರೆಯಲಿವೆ. ಈ ಎಲ್ಲ ಸೌಲಭ್ಯಗಳ ಕುರಿತು ಕರಪತ್ರಗಳನ್ನು ಹಂಚುವ ಮೂಲಕ ಪ್ರಚಾರ ಕೈಗೊಳ್ಳಲಾಗಿದೆ. ಪೋಷಕರ ಸಭೆಗಳನ್ನು ನಡೆಸಿ ಸರ್ಕಾರಿ ಶಾಲೆಗೆ ದಾಖಲಿಸುವಂತೆ ಮನವರಿಕೆ ಮಾಡಿಕೊಡಲಾಗಿದೆ. ದೊಡ್ಡಬೆಳವಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜು ಸಹ ಈಗ ಕರ್ನಾಟಕ ಪಬ್ಲಿಕ್ ಶಾಲಾ ವ್ಯಾಪ್ತಿಗೆ ಒಳಪಟ್ಟಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.