ಆನೇಕಲ್:ತಾಲ್ಲೂಕಿನ ಕೂಡ್ಲು ಗ್ರಾಮದ ಬಿಬಿಎಂಪಿ ವ್ಯಾಪ್ತಿಯಲ್ಲಿ ಅಮೃತ ನಗರೋತ್ಥಾನ ಯೋಜನೆಯಡಿ ₹ 8 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಿ. ಶಿವಣ್ಣ ಬುಧವಾರ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಕೂಡ್ಲು ಗ್ರಾಮವು ನಗರ ಪ್ರದೇಶಕ್ಕೆ ಹೊಂದಿಕೊಂಡಿದೆ. ಆನೇಕಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಏಕೈಕ ಬಿಬಿಎಂಪಿ ವಾರ್ಡ್ ಆಗಿದೆ. ಹಾಗಾಗಿ, ಇಲ್ಲಿ ಹೆಚ್ಚಿನ ಮೂಲಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ. ಗ್ರಾಮದ ವ್ಯಾಪ್ತಿಯಲ್ಲಿ ಸುಸಜ್ಜಿತ ರಸ್ತೆ, ಬೀದಿದೀಪ ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ನಗರಗಳಲ್ಲಿ ದೊರೆಯುವ ಎಲ್ಲಾ ಸೌಲಭ್ಯಗಳು ದೊರೆಯುವಂತಾಗಬೇಕು. ಕೂಡ್ಲು ಬಿಬಿಎಂಪಿ ವಾರ್ಡ್‌ನಲ್ಲಿ 50 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದೆ. ಈ ವ್ಯಾಪ್ತಿಯಲ್ಲಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಸರ್ಕಾರ ಅನುದಾನ ಮಂಜೂರು ಮಾಡಬೇಕು. ಸಾರ್ವಜನಿಕರು ಕೆಲವು ಸಮಸ್ಯೆಗಳ ಬಗ್ಗೆ ಅಹವಾಲು ಸಲ್ಲಿಸಿದ್ದಾರೆ. ಕೂಡ್ಲು ವ್ಯಾಪ್ತಿಯ ಕೆಲವು ಬಡಾವಣೆಗಳಿಗೆ ಸಂಪರ್ಕ ರಸ್ತೆ, ಬೀದಿದೀಪ ಸೌಲಭ್ಯ ಕಲ್ಪಿಸಲು ಅಧಿಕಾರಿ ಗಳಿಗೆ ಸೂಚಿಸಲಾಗಿದೆ ಎಂದರು.

ಕೂಡ್ಲು ಮಾರ್ಗವು ಬೆಂಗಳೂರಿಗೆ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಹೊಸ ರೋಡ್, ಕೂಡ್ಲು ಸೇರಿದಂತೆ ಕೆಲವು ರಸ್ತೆಗಳಲ್ಲಿ ಹೆಚ್ಚಿನ ಟ್ರಾಫಿಕ್ ಸಮಸ್ಯೆಯಿದೆ. ಈ ಸಮಸ್ಯೆ ಪರಿಹಾರಕ್ಕೆ ಸಂಚಾರ ಪೊಲೀಸರು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಮಳೆ ಬಂದಾಗ ಕೆಲವು ಮನೆಗಳಿಗೆ ನೀರು ನುಗ್ಗುತ್ತಿರುವ ಬಗ್ಗೆ ದೂರುಗಳಿವೆ. ಈ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಾರ್ವಜನಿಕರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೂಡ್ಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎನ್. ಬಾಬುರಾಜ್, ಮುಖಂಡರಾದ ಬಾಲಕೃಷ್ಣಾ ರೆಡ್ಡಿ, ಚಿಕ್ಕ ಮುನಿಯಪ್ಪ, ಆರ್.ಎಂ.ಎನ್. ರಮೇಶ್, ಗೋವಿಂದ ರೆಡ್ಡಿ, ಸುರೇಶ್ ಬಾಬು, ಸಂತೋಷ್, ಗಜೇಂದ್ರ ರೆಡ್ಡಿ, ಅನಂತ ರೆಡ್ಡಿ, ಶಿವಪ್ಪ, ಕೆ.ಬಿ. ಮಂಜುನಾಥ್, ಭೀಮಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.