ವಿಜಯಪುರ (ಬೆಂ.ಗ್ರಾಮಾಂತರ):ಹೋಬಳಿಯ ಮಂಡಿಬೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಡ್ಡದನಾಯಕನಹಳ್ಳಿ ಗ್ರಾಮದ ದುರ್ಗಾ ಮಹೇಶ್ವರಿ ದೇವಾಲಯದ ಆವರಣದಲ್ಲಿ ಮಂಗಳವಾರ ಕಾರ್ತಿಕ ಮಾಸದ ಅಂಗವಾಗಿ ಲಕ್ಷ ದೀಪೋತ್ಸವ ವಿಜೃಂಭಣೆಯಿಂದ ನೆರವೇರಿತು.

ದುರ್ಗಾ ಮಹೇಶ್ವರಿ ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗಿನಿಂದಲೇ ಭಕ್ತರು ದೇವಾಲಯದ ಆವರಣದಲ್ಲಿ ಸಾಲುಗಟ್ಟಿ ನಿಂತು ದೇವಿಯ ದರ್ಶನ ಪಡೆದರು. ನೂರಾರು ಮಹಿಳೆಯರು, ಮಕ್ಕಳು ದೇವಾಲಯದ ಪ್ರಾಂಗಣದಲ್ಲಿ ಮಣ್ಣಿನ ಹಣತೆ ಹಚ್ಚಿ ದೇವರಿಗೆ ಹರಕೆ ತೀರಿಸಿ, ವಿಶೇಷ ಪೂಜೆ ಸಲ್ಲಿಸಿದರು.

ಕೆಲವರು ತಮ್ಮ ಮಕ್ಕಳ ಹೆಸರಿನಲ್ಲಿ ದೀಪ ಹಚ್ಚಿದರು. ದುರ್ಗಾ ಮಹೇಶ್ವರಿಯ ಹೆಸರಿನ ಮಾದರಿಯಲ್ಲಿ ದೀಪಗಳನ್ನು ಜೋಡಿಸಲಾಗಿತ್ತು. ದೇವಾಲಯವನ್ನು ವಿದ್ಯುತ್ ದೀಪಗಳಿಂದ ಅಲಂಕಾರಗೊಳಿಸಲಾಗಿತ್ತು. ಉತ್ಸವ ಮೂರ್ತಿಯನ್ನು ಮಂಗಳವಾದ್ಯಗಳೊಂದಿಗೆ ಮೆರವಣಿಗೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.