ಸೂಲಿಬೆಲೆ: ಮಾದಕ ವಸ್ತುಗಳಿಂದ ಯುವ ಜನರನ್ನು ದೂರ ಇಡಬೇಕಾಗಿದೆ. ಈ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ಹೊಸಕೋಟೆ ಹೆಚ್ಚುವರಿ ನ್ಯಾಯಾಧೀಶರಾದ ಗಿರೀಶ್ ಆರ್.ಬಿ ಹೇಳಿದರು.

ಸೂಲಿಬೆಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು – ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿಯೊಬ್ಬ ಸಾಮಾನ್ಯ ಮನುಷ್ಯ ಕೂಡ ಕಾನೂನು ತಿಳಿವಳಿಕೆ ಪಡೆಯಬೇಕು ಎಂದು ಕಿವಿಮಾತು ಹೇಳಿದರು.

ವಕೀಲ ಎಚ್.ಎಂ.ಆನಂದ್ ಮಾತನಾಡಿ, ಸಾಮಾನ್ಯ ಕಾನೂನು ವಿಶೇಷವಾಗಿ ಯುವಕರು ತಿಳಿದುಕೊಳ್ಳಬೇಕಾದ ಅವಶ್ಯವಿದೆ. ಹಕ್ಕು ಮತ್ತು ಕರ್ತವ್ಯ ಪಾಲಿಸುವುದರ ಜತೆಗೆ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗಿದೆ ಎಂದು ಹೇಳಿದರು.

ವಕೀಲ ಬಿ.ಎಂ.ಅನಂತಕುಮಾರ್ ಮಾತನಾಡಿ, ಮಾದಕ ವಸ್ತುಗಳಿಗೆ ಬಲಿಯಾಗಿರುವ ಯುವಶಕ್ತಿ, ಆತ್ಮಸ್ಥೈರ್ಯ ಕಳೆದುಕೊಂಡಿದೆ ಎಂದರು.

ಹೊಸಕೋಟೆ ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಸುಬ್ರಮಣಿ, ಕಾಲೇಜಿನ ಪ್ರಾಂಶುಪಾಲ ನಾರಾಯಣಸ್ವಾಮಿ ಮಾತನಾಡಿದರು.

ತಾಲ್ಲೂಕು ಕಾನೂನು ಸಮಿತಿ ಹಾಗೂ ಕಾಲೇಜಿನ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿನಾಯಕ ಎನ್.ಮಾಯಣ್ಣನವರ್ ಕಾರ್ಯಕ್ರಮ ಉದ್ಘಾಟಿಸಿದರು.

ವಕೀಲರ ಸಂಘ ಮತ್ತು ಸೇವಾ ಸಮಿತಿ ಪದಾಧಿಕಾರಿಗಳು, ಕಾಲೇಜಿನ ಅಧ್ಯಾಪಕ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.