ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತೈಲ ಬೆಲೆ ಏರಿಕೆ ಸಾಮಾನ್ಯರನ್ನು ಬಾಧಿಸದು: ಸಚಿವ ಕೆ.ಎಚ್‌.ಮುನಿಯಪ್ಪ

Published 17 ಜೂನ್ 2024, 14:21 IST
Last Updated 17 ಜೂನ್ 2024, 14:21 IST
ಅಕ್ಷರ ಗಾತ್ರ

ವಿಜಯಪುರ(ದೇವನಹಳ್ಳಿ): 'ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಕಡಿಮೆ ಇದೆ. ಸ್ವಲ್ಪ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡಲಾಗಿದೆ. ರೈತರು ಮತ್ತು ಸಾರ್ವಜನಿಕರನ್ನು ಇದು ಬಾಧಿಸದು’ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗಿಂತ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಇದೆ. ಸಾಮಾನ್ಯ ವರ್ಗದ ಜನರನ್ನು ಗಮನದಲ್ಲಿ ಇಟ್ಟುಕೊಂಡೆ ಬೆಲೆಯನ್ನು ಸ್ವಲ್ಪ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ ಎಂದರು.

ಸಾರ್ವಜನಿಕರು ಸರ್ಕಾರದ ವಿರುದ್ಧ ಪ್ರತಿಭಟಿಸಬೇಕು ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,  ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT