ಹೊಸಕೋಟೆ: ‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಹಲವು ಕಾರಣಗಳಿರಬಹುದು. ಆದರೆ, ಮತದಾರರಿಗೆ ಹಂಚಲು ಕೊಟ್ಟಿದ್ದ ಹಣ ಸರಿಯಾಗಿ ಹಂಚಿಕೆಯಾಗಲಿಲ್ಲ. ಹಾಗಾಗಿ ನಾನು ಸೋಲಬೇಕಾಯಿತು’ ಎಂದು ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ ನಾಗರಾಜ್ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಮತದಾರರಿಗೆ ಹಂಚಿಕೆಯಾಗಬೇಕಿದ್ದ ಹಣ ಅವರನ್ನು ತಲುಪಿಲ್ಲ ಎಂಬ ಕುರಿತು ನನಗೆ ಹಲವು ದೂರು ಬಂದಿದ್ದವು. ಈ ಲೋಕಸಭಾ ಚುನಾವಣೆಯಲ್ಲಿ ಹಾಗೇ ಆಗುವುದು ಬೇಡ’ ಎಂದರು.

‘ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಹಲವು ಮುಖಂಡರ ಸ್ವಯಂಕೃತ ಅಪರಾಧವೂ ನನ್ನ ಸೋಲಿಗೆ ಕಾರಣ. ಸಮಯದ ಕೊರತೆಯಿಂದ ಪ್ರಚಾರ ಕೈಗೊಳ್ಳಲು ಸಾಧ್ಯವಾಗಲಿಲ್ಲ’ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.