ದೊಡ್ಡಬಳ್ಳಾಪುರ: ‘ಅಧಿಕೃತವಾಗಿ ಇಂತಹದ್ದೇ ತಾಲ್ಲೂಕು, ಜಿಲ್ಲಾ ಕೇಂದ್ರ ಎಂದು ಘೋಷಣೆ ಆಗಿಲ್ಲ. ಹೀಗಾಗಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆಯುವ ಸಮಾರಂಭಗಳನ್ನು ಜಿಲ್ಲೆಯ ಉಪ ವಿಭಾಗದ ಕೇಂದ್ರವಾಗಿರುವ ದೊಡ್ಡಬಳ್ಳಾಪುರದಲ್ಲಿಯೇ ಆಚರಿಸಬೇಕು. ತಾರತಮ್ಯ ಮಾಡಬಾರದು’ ಎಂದು ಜಿಲ್ಲಾ ಹೋರಾಟ ಸಮಿತಿಯ ಸಂಚಾಲಕ ರಾಜಘಟ್ಟ ರವಿ ಹೇಳಿದರು.

ಅವರು ನಗರದ ಕನ್ನಡ ಜಾಗೃತ ಭವನದಲ್ಲಿ ಬುಧವಾರ ಜಿಲ್ಲಾ ಕೇಂದ್ರ ಹೋರಾಟ ಸಮಿತಿಯಿಂದ ನಡೆದ ಸಭೆಯಲ್ಲಿ ಮಾತನಾಡಿದರು.

ಜನರ ಅನುಕೂಲಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಇರಲಿ ಎನ್ನುವ ದೃಷ್ಟಿಯಿಂದ ಚರಪ್ಪರದಕಲ್ಲು ಗ್ರಾಮದ ಸಮೀಪ ಕಚೇರಿ ಸ್ಥಾಪನೆಯಾಗಿದೆಯೇ ಹೊರತು, ಅರ್ಹತೆಯ ಮಾನದಂಡದ ಆಧಾರದ ಮೇಲೆ ಜಿಲ್ಲಾಧಿಕಾರಿ ಕಚೇರಿ ಸ್ಥಾಪನೆಯಾಗಿಲ್ಲ ಎಂದು ಹೇಳಿದರು.

ಜಿಲ್ಲಾ ಕೇಂದ್ರವಾಗುವ ಎಲ್ಲಾ ಮಾನದಂಡ, ಅರ್ಹತೆಯು ದೊಡ್ಡಬಳ್ಳಾಪುರಕ್ಕೆ ಇದೆ. ಹೀಗಾಗಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆಯುವ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಕನ್ನಡ ರಾಜ್ಯೋತ್ಸವ ಸೇರಿದಂತೆ ಇತರೆ ಕಾರ್ಯಕ್ರಮಗಳನ್ನು ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲೇ ನಡೆಸಬೇಕು ಎಂದರು.

ಕನ್ನಡ ಪಕ್ಷದ ಜಿಲ್ಲಾ ಅಧ್ಯಕ್ಷ ಸಂಜೀವ್ ನಾಯ್ಕ್ ಮಾತನಾಡಿ, ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹಬ್ಬಗಳನ್ನು ದೊಡ್ಡಬಳ್ಳಾಪುರದಲ್ಲೇ ನಡೆಸುವಂತೆ ಅ. 13 ರದು ಬೆಳಿಗ್ಗೆ 11ಗಂಟೆಗೆ ತಾಲ್ಲೂಕಿನ ಎಲ್ಲಾ ಸಂಘಟನೆಗಳ ಮುಖಂಡರ ನಿಯೋಗ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಹೋರಾಟ ಸಮಿತಿ ಮುಖಂಡರಾದ ಡಿ.ಪಿ. ಆಂಜನೇಯ, ಪರಮೇಶ್, ತೂಬಗೆರೆ ಷರೀಫ್, ಕೆ. ವೆಂಕಟೇಶ್, ಪಿ. ಗೋವಿಂದರಾಜ್, ಚಿದಾನಂದ್, ದಿವಾಕರ್ ನಾಗ್, ವೆಂಕಟೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.