ದೇವನಹಳ್ಳಿ: ರಾಜ್ಯದಲ್ಲಿ ಸರ್ಕಾರದಿಂದ ಹಿಂದಿ ದಿವಸ್ ಆಚರಣೆ ಮಾಡುತ್ತಿರುವುದು ಪ್ರಜಾಪ್ರಭುತ್ವದ ಆಶಯಕ್ಕೆ ವಿರೋಧಿಯಾಗಿದೆ. ಪ್ರಾದೇಶಿಕ ಭಾಷೆಗೆ ಅಪಮಾನ ಮಾಡಲಾಗುತ್ತಿದೆ ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಆರ್. ಮುನೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಹಿಂದಿ ದಿವಸ್ ಆಚರಣೆ ವಿರೋಧಿಸಿ ಪಟ್ಟಣದ ಆಡಳಿತ ಸೌಧದ ಮುಂಭಾಗ ಬುಧವಾರ ಜೆಡಿಎಸ್ ಪಕ್ಷದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಹಿಂದಿ ಭಾಷೆ ಪ್ರಾಬಲ್ಯವಿದ್ದ ರಾಜ್ಯದಲ್ಲಿ ಮಾತ್ರ ಆಚರಣೆ ಮಾಡುತ್ತಿದ್ದ ಭಾಷಾ ದಿನವನ್ನು ಕನ್ನಡ ಭಾಷೆಯ ನಾಡಿನಲ್ಲಿ ಆಚರಿಸುತ್ತಿದ್ದಾರೆ. ಅನ್ಯ ಭಾಷಿಕರ ದಾಳಿಗೆ ಕನ್ನಡಿಗರು ತತ್ತರಿಸಿ ಹೋಗಿದ್ದಾರೆ. ಅದನ್ನು ಮುಂದುವರಿಸಲು ಆಡಳಿತ ಅಂಗವು ಅನುಮತಿಸಿರುವುದು ದುಃಖದ ವಿಚಾರ ಎಂದು ಬೇಸರ
ವ್ಯಕ್ತಪಡಿಸಿದರು.

ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಜೊನ್ನಹಳ್ಳಿ ಮುನಿರಾಜು, ತಾಲ್ಲೂಕು ಸೊಸೈಟಿ ಅಧ್ಯಕ್ಷ ಎ. ದೇವರಾಜ್ ಮಾತನಾಡಿದರು.

ಗ್ರೇಡ್–2 ತಹಶೀಲ್ದಾರ್ ಉಷಾ ಅವರಿಗೆ ಮನವಿ ಪತ್ರ
ಸಲ್ಲಿಸಿದರು.

ಜೆಡಿಎಸ್ ಜಿಲ್ಲಾ ಎಸ್.ಸಿ ಘಟಕದ ಅಧ್ಯಕ್ಷ ಎಸ್. ಗುರಪ್ಪ, ತಾಲ್ಲೂಕು ಎಸ್.ಟಿ ಘಟಕದ ಅಧ್ಯಕ್ಷ ಯರ್ತಿಗಾನಹಳ್ಳಿ ಶಿವಣ್ಣ, ತಾಲ್ಲೂಕು ಸೊಸೈಟಿ ನಿರ್ದೇಶಕರಾದ ರಾಮಮೂರ್ತಿ, ಚನ್ನಕೃಷ್ಣಪ್ಪ, ಭಾಗ್ಯಮ್ಮ, ಗಂಗಾಧರ್, ಕಾಮೇನಹಳ್ಳಿ ರಮೇಶ್, ಟೌನ್ ಜೆಡಿಎಸ್ ಅಧ್ಯಕ್ಷ ಮುನಿನಂಜಪ್ಪ, ಪ್ರಧಾನ ಕಾರ್ಯದರ್ಶಿ ಸಾಯಿಕುಮಾರ್ ಬಾಬು, ಪುರಸಭಾಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ಸ್ಥಾಯಿಸಮಿತಿಮಾಜಿ ಅಧ್ಯಕ್ಷ ಎಂ. ಕುಮಾರ್, ಕಸಬಾ ಹೋಬಳಿ ಅಧ್ಯಕ್ಷ ಚಿಕ್ಕನಾರಾಯಣಸ್ವಾಮಿ, ತಾಲ್ಲೂಕು ಯುವ ಜೆಡಿಎಸ್ ಅಧ್ಯಕ್ಷ ಆರ್. ಭರತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಟಿ. ರವಿ, ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ, ದೊಡ್ಡಸಣ್ಣೆ ವಿ.ಎಸ್.ಎಸ್.ಎನ್ ಅಧ್ಯಕ್ಷ ಸಿ. ಮುನಿರಾಜು, ಮಾಜಿ ಅಧ್ಯಕ್ಷ ಎ.ಎನ್. ವೆಂಕಟೇಶಪ್ಪ, ವಿಜಯಪುರ ಹೋಬಳಿ ಅಧ್ಯಕ್ಷ ವೀರಪ್ಪ, ಚನ್ನರಾಯಪಟ್ಟಣ ಹೋಬಳಿ ಅಧ್ಯಕ್ಷ ಮುನಿರಾಜು, ಕುಂದಾಣ ಹೋಬಳಿ ಅಧ್ಯಕ್ಷ ಚಂದ್ರೇಗೌಡ ಹಾಗೂ ಪಕ್ಷದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.