ವಿಜಯಪುರ(ದೇವನಹಳ್ಳಿ): ಪಟ್ಟಣದ 23 ವಾರ್ಡ್ಗಳಲ್ಲಿಯೂ ಕಸವನ್ನು ಪ್ರತ್ಯೇಕಿಸಿ ಪುರಸಭೆಯ ಕಸ ಸಂಗ್ರಹಿಸುವ ವಾಹನಕ್ಕೆ ನೀಡಬೇಕು. ಇಲ್ಲದಿದ್ದರೆ ದಂಡ ವಿಧಿಸಲಾಗುವುದು ಎಂದು ಪುರಸಭೆಯಿಂದ ಎಚ್ಚರಿಕೆ ನೀಡಲಾಗಿದೆ.

ಪಟ್ಟಣದ ತ್ಯಾಜ್ಯವಿಲೇವಾರಿ ಘಟಕಕ್ಕೆ ಭೇಟಿ ನೀಡಿದ ಪುರಸಭೆ ಮುಖ್ಯಾಧಿಕಾರಿ ಜಿ.ಆರ್.ಸಂತೋಷ್ ಮಾತನಾಡಿ, ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ ಕಸ ಸಂಗ್ರಹ ವಾಹನಕ್ಕೆ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ಇದನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು ಎಂದರು.

ಗೊಬ್ಬರ ತಯಾರಿಕೆಯ ಎರಡು ಘಟಕಗಳನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿದೆ. ಸಾರ್ವಜನಿಕರಿಂದ ಕಸ ಸಂಗ್ರಹ ವಾಹನಗಳಲ್ಲಿ ತರುತ್ತಿರುವ ಹಸಿ ಮತ್ತು ಒಣಕಸವನ್ನು ಪ್ರತ್ಯೇಕಿಸಿ ಗೊಬ್ಬರವನ್ನಾಗಿ ಮಾರ್ಪಡಿಸಲಾಗುತ್ತಿದೆ. ಗೊಬ್ಬರವನ್ನು ರೈತರು, ತಮ್ಮ ತೋಟಗಳಿಗೆ ಬಳಕೆ ಮಾಡಿಕೊಳ್ಳಲು ಅನುಕೂಲವಾಗಲಿದೆ. ಜನ ಕಸವನ್ನು ಪ್ರತ್ಯೇಕಿಸಿ ನೀಡದಿದ್ದರೆ ಗೊಬ್ಬರ ತಯಾರಿಸಲು ಕಷ್ಟವಾಗುತ್ತದೆ ಎಂದು ಹೇಳಿದರು.

ಪಟ್ಟಣದ ಸ್ವಚ್ಛತೆ ಜೊತೆಗೆ ವೈಜ್ಞಾನಿಕ ಕಸ ವಿಲೇವಾರಿಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.

ಪರಿಸರ ಎಂಜಿನಿಯರ್ ಶೇಖರ್, ಹೋಬಳಿಯ ಇರಿಗೇನಹಳ್ಳಿಯ ಬಳಿಯಲ್ಲಿ ಕಸವಿಲೇವಾರಿ ಘಟಕ ಸ್ಥಾಪನೆಗೆ ಅಗತ್ಯ ಯಂತ್ರೋಪಕರಣ ತರಲಾಗಿದೆ. ಪ್ರಾಯೋಗಿಕವಾಗಿ ಇಲ್ಲಿ ಎರಡು ತಂಡಗಳಲ್ಲಿ ಕಸವನ್ನು ಗೊಬ್ಬರವನ್ನಾಗಿ ಮಾರ್ಪಡಿಸಲಾಗುತ್ತಿದೆ. ಇದರಲ್ಲಿ ಉತ್ತಮ ಗುಣಮಟ್ಟದ ಗೊಬ್ಬರ ತಯಾರಾಗಲಿದೆ. ರೈತರ ತೋಟಗಳಿಗೆ ಅಗತ್ಯವಿರುವ ಪೋಷಕಾಂಶಗಳನ್ನು ಇದು ಒದಗಿಸಲಿದೆ ಇದರ ಸದುಪಯೋಗವನ್ನು ಜನರು ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.