ಹೊಸಕೋಟೆ: ತಾಲ್ಲೂಕಿನಾದ್ಯಂತ ನಿವೇಶನ ರಹಿತ ಅರ್ಹ ಫಲಾನುಭವಿ ಗುರುತಿಸಿ ಪ್ಸೂರು ನೀಡುವ ಯೋಜನೆ ಹಾಕಿಕೊಳ್ಳಲಾಗಿದೆ. ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಆಶ್ರಯ ನಿವೇಶನ ಹಂಚುವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಅವರು ತಿಳಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಶ್ರಯ ನಿವೇಶನ ಹಂಚಿಕೆ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿ, ತಾಲ್ಲೂಕಿನ ಸೂರು ಇಲ್ಲದವರನ್ನು ಗುರುತಿಸಿ ಅವರಿಗೆ ಆಶ್ರಯ ನಿವೇಶನದಲ್ಲಿ ನಿವೇಶನ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.

ಈಗಾಗಲೇ ತಾಲ್ಲೂಕಿನಲ್ಲಿ 320 ಎಕರೆ ಜಮೀನನ್ನು ಆಶ್ರಯ ನಿವೇಶನ ಹಂಚಿಕೆಗಾಗಿ ಕಾಯ್ದಿರಿಸಲಾಗಿದೆ. ಒಟ್ಟು 142.28 ಎಕರೆ ಜಮೀನನ್ನು ಅಭಿವೃದ್ಧಿಪಡಿಸಿ ಹಂಚಲು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದರಲ್ಲಿ 32.45 ಎಕರೆಯಲ್ಲಿ ನಿವೇಶ ಅಭಿವೃದ್ಧಿಪಡಿಸಲು ನಿಗಮದಿಂದ ಹಣ ಬಿಡುಗಡೆಯಾಗಿ 915 ನಿವೇಶನ ಅಭಿವೃದ್ಧಿಪಡಿಸಲಾಗುತ್ತಿದೆ. ಉಳಿದ 105 ಎಕರೆ ಜಮೀನು ಸರ್ವೇ ಮಾಡಿ ನಕ್ಷೆ ತಯಾರಿಸಿ ರಾಜೀವ್ ಗಾಂಧಿ ಕಾರ್ಪೊರೇಷನ್ಗೆ ಸಲ್ಲಿಸಲು ಬಾಕಿ ಇರುತ್ತದೆ. ವಿವಿಧ ಕಾರಣಗಳಿಗಾಗಿ ಉಳಿಕೆ 58.23 ಎಕರೆಯನ್ನು ಕೈ ಬಿಡಲಾಗಿದೆ ಎಂದು ತಿಳಿಸಿದರು.

ವಸತಿ ಯೋಜನೆ, ಆರೋಗ್ಯ ಇಲಾಖೆ, ಅಂಗನವಾಡಿಗಳಿಗೆ ಹಂಚಿರುವ ನಿವೇಶನಗಳು ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿಯ ಕುರಿತು ಚರ್ಚಿಸಲಾಯಿತು.

ತಹಶೀಲ್ದಾರ್ ಸೋಮಶೇಖರ್, ತಾಪಂ ಇಒ ಸಿ.ಎನ್.ನಾರಾಯಣಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.